Thursday, September 19, 2024
Homeರಾಜ್ಯನಟ ದರ್ಶನ್‌ ಮಾಡಿರುವುದು ಹೇಯ ಕೃತ್ಯ : ಜಗದೀಶ್‌ ಶೆಟ್ಟರ್‌

ನಟ ದರ್ಶನ್‌ ಮಾಡಿರುವುದು ಹೇಯ ಕೃತ್ಯ : ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ, ಜೂ.12- ನಟ ದರ್ಶನ್‌ ಮಾಡಿರುವುದು ಹೇಯ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್‌ ಶೆಟ್ಟರ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳ ಮೂಲಕ ತಮ ತಮ ಅಭಿಪ್ರಾಯ ಹಂಚಿಕೊಳ್ಳುವುದು ಸಾಮಾನ್ಯವಾಗಿದೆ. ಅದರೆ ಅದನ್ನು ಇಷ್ಟೊಂದು ಗಂಭೀರವಾಗಿ ಪರಿಗಣಿಸುವುದು ಸರಿಯಲ್ಲ. ದರ್ಶನ್‌ ಹಾಗೂ ಅವರ ಟೀಂ ಮಾಡಿದ್ದು ರಾಕ್ಷಸ ಪ್ರವೃತ್ತಿ ಎಂದರು.

ರೇಣುಕಾಸ್ವಾಮಿ ಮಾಡಿದ್ದು ತಪ್ಪು ಆಗಿದ್ದರೆ ಕಾನೂನು ಮೂಲಕ ಬಗೆಹರಿಸಿಕೊಳ್ಳಬಹುದಿತ್ತು. ಆದರೆ ಈ ಮಟ್ಟಕ್ಕೆ ಹೋಗುವುದು ಸರಿಯಲ್ಲ ಎಂದರು.ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲು ಸ್ವತಃ ಕಾಂಗ್ರೆಸ್‌‍ ಶಾಸಕರೇ ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ಕೊಟ್ಟ ಅವರು, ನಾನು ಮೊದಲೇ ಹೇಳಿದ್ದೆ, ಐದು ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿ ಗ್ಯಾರಂಟಿಗಳಿಂದ ಆರ್ಥಿಕ ವ್ಯವಸ್ಥೆ ಹೆದಗೆಟ್ಟಿದೆ ಎಂದು ಅವರ ಪಕ್ಷದ ಶಾಸಕರೇ ಹೇಳಿದ್ದರಲ್ಲಿ ತಪ್ಪು ಇಲ್ಲ ಎಂದರು.

ಇನ್ನೂ ತಾವು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೀರಿ ಎಂಬ ಕುರಿತು ಮಾತನಾಡಿದ ಅವರು ನಾನು ಎಲ್ಲಿಯೂ ಹೇಳಿಲ್ಲ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಹೆಚ್ಚು ಮತಗಳ ಅಂತರದಿಂದ ಆಯ್ಕೆ ಆಗಿದ್ದು ಪಕ್ಷ ಯಾವ ಜವಾಬ್ದಾರಿ ಕೊಡುತ್ತದೆ ಅದನ್ನ ನಿಭಾಯಿಸಿಕೊಂಡು ಹೋಗಲು ಸಿದ್ಧ ಎಂದರು.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಮೇಲೆ ಚಾಕು ಇರಿತ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು ಈ ರೀತಿಯಾಗಿ ನಡೆಯಬಾರದು. ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದರು

RELATED ARTICLES

Latest News