Friday, May 3, 2024
Homeರಾಜಕೀಯಕಾರ್ಯಕರ್ತರ ಅಪೇಕ್ಷೆಯಂತೆ ಶೆಟ್ಟರ್ ಬಿಜೆಪಿ ಸೇರ್ಪಡೆ : ಯಡಿಯೂರಪ್ಪ

ಕಾರ್ಯಕರ್ತರ ಅಪೇಕ್ಷೆಯಂತೆ ಶೆಟ್ಟರ್ ಬಿಜೆಪಿ ಸೇರ್ಪಡೆ : ಯಡಿಯೂರಪ್ಪ

ನವದೆಹಲಿ,ಜ.25- ಜಗದೀಶ್ ಶೆಟ್ಟರ್ ಅವರು ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಿ ಮತ್ತು ಪಕ್ಷದ ಅನೇಕ ಹುದ್ದೆಗಳನ್ನು ನಿರ್ವಹಿಸಿ ಪಕ್ಷಕ್ಕಾಗಿ ದುಡಿದ ವ್ಯಕ್ತಿ. ಅವರು ಮತ್ತೆ ಬಿಜೆಪಿ ಸೇರಬೇಕೆಂಬುದು ಕಾರ್ಯಕರ್ತರ ಅಪೇಕ್ಷೆಯಾಗಿತ್ತು. ಅದರಂತೆ ಅವರು ಪಕ್ಷ ಸೇರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಇಂದು ಬೆಳಗ್ಗೆ ನಾನು ಮತ್ತು ಜಗದೀಶ್ ಶೆಟ್ಟರ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ. ಅವರು ಸಹ ಬಹಳ ಸಂತೋಷದಿಂದ ಈ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ ಎಂದರು. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೂ ಸಹ ಭೇಟಿ ಮಾಡಲಿದ್ದೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ನಮಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದು ಹೇಳಿದರು.

ನಾನು ನಿವೃತ್ತಿ ಘೋಷಿಸಿಲ್ಲ : ಮೇರಿ ಕೋಮ್
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಮತ್ತು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಯಾಗಿರುವುದು ಕಾರ್ಯಕರ್ತರಿಗೆ ಸಂತಸ ತಂದಿದೆ ಎಂದರು. ಇಂದು ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯಾಗಿದ್ದು, ಮತ್ತೆ ಶೆಟ್ಟರ್ ಅವರು ಬಿಜೆಪಿ ಸೇರಬೇಕೆಂಬುದು ರಾಜ್ಯ ಕಾರ್ಯಕರ್ತರ ಅಪೇಕ್ಷೆಯಾಗಿತ್ತು. ಅದರಂತೆ ಅವರು ಪಕ್ಷಕ್ಕೆ ಮರಳಿ ಬಂದಿರುವುದು ಪಕ್ಷಕ್ಕೆ ಶಕ್ತಿ ತುಂಬಿದೆ ಎಂದರು.

ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಯಡಿಯೂರಪ್ಪನವರ ಜೊತೆ ಚರ್ಚೆ ಮಾಡಿ ಯಾವುದೇ ಅಪೇಕ್ಷೆ ಇಲ್ಲದೆ ಜಗದೀಶ್ ಶೆಟ್ಟರ್ ಅವರು ಪಕ್ಷಕ್ಕೆ ವಾಪಸ್ಸಾಗಿದ್ದಾರೆ ಎಂದು ಹೇಳಿದರು.

RELATED ARTICLES

Latest News