Thursday, December 12, 2024
Homeರಾಷ್ಟ್ರೀಯ | Nationalರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಬಂಧನ

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಬಂಧನ

Jagjit Singh Dallewal detained

ಚಂಡೀಗಢ, ನ.26 (ಪಿಟಿಐ)– ರೈತರ ಬೇಡಿಕೆಗಳಿಗೆ ಒತ್ತಾಯಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಖಾನೌರಿ ಗಡಿ ಭಾಗದಿಂದ ಪೊಲೀಸರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಕಿಸಾನ್ ಮಜ್ದೂರ್ ಮೋರ್ಚಾದ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿಗಾಗಿ ಒತ್ತಾಯಿಸಿ ಇಂದಿನಿಂದ ಆಮರಣಾಂತ ಉಪವಾಸ ಆರಂಭಿಸುವುದಾಗಿ ದಲ್ಲೆವಾಲ್ ನಿನ್ನೆ ಘೋಷಿಸಿದ್ದರು. ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಅವರು ಪ್ರತಿಪಾದಿಸಿದ್ದರು.

ಇಂದು ಮುಂಜಾನೆ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುವ ಮೊದಲು ಪೊಲೀಸರು ಬಲವಂತವಾಗಿ ಸ್ಥಳದಿಂದ ಅವರು ಕರೆದೊಯ್ದಿದ್ದಾರೆ ಎಂದು ಪ್ರತಿಪಾದಿಸಿದ ಪಂಧೇರ್ ಅವರು ಈ ಕತ್ಯವನ್ನು ಬಲವಾಗಿ ಖಂಡಿಸುವುದಾಗಿ ಹೇಳಿದರು ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡಲು ಒತ್ತಾಯಿಸಿದರು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಆಮರಣಾಂತ ಉಪವಾಸ ಆರಂಭಿಸುವ ಮೂಲಕ ಎಂಎಸ್ಪಿಗೆ ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಬೆಂಬಲಿಸಿ ತಮ ಆಂದೋಲನವನ್ನು ತೀವ್ರಗೊಳಿಸುವ ಯೋಜನೆಯನ್ನು ಈ ಹಿಂದೆ ಘೋಷಿಸಿದ್ದವು.

ಫೆಬ್ರವರಿ 13 ರಿಂದ ದೆಹಲಿಗೆ ತಮ್ಮ ಮೆರವಣಿಗೆಯನ್ನು ಭದ್ರತಾ ಪಡೆಗಳು ತಡೆದ ನಂತರ ರೈತರು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಫೆಬ್ರವರಿ 18 ರಿಂದ ತಮ ಸಮಸ್ಯೆಗಳ ಬಗ್ಗೆ ಕೇಂದ್ರವು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಪ್ರತಿಭಟನಾನಿರತ ರೈತರು ತಮ ಬೇಡಿಕೆಗಳನ್ನು ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

RELATED ARTICLES

Latest News