ಬೆಂಗಳೂರು,ಅ.10- ಜೈನ ಮಂದಿರದಲ್ಲಿ ಕನ್ನಕಳವು ಮಾಡಿದ್ದ ನಾಲ್ವರು ಅಂತರಾಜ್ಯ ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 9.75 ಲಕ್ಷ ರೂ. ಮೌಲ್ಯದ 14 ಕೆ.ಜಿ. ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಆದಿನಾಥ ಜೈನ ಮಂದಿರದಲ್ಲಿ ಸೆ.9ರಂದು ರಾತ್ರಿ ಕಳ್ಳರು ದೇವಾಲಯದ ಒಳಗೆ ನುಗ್ಗಿ ಬೆಳ್ಳಿ ಆಭರಣವನ್ನು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳು ಮತ್ತು ಮಾಲು ಪತ್ತೆ ಮಾಡಲು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಒಂದು ವಿಶೇಷ ತಂಡವನ್ನು ರಚಿಸಿದ್ದರು.
ಈ ತಂಡವು ಆರೋಪಿಗಳ ಬಗ್ಗೆ ಹಲವು ಮಾಹಿತಿಗಳನ್ನು ಸಂಗ್ರಹಿಸಿ, ರಾಜಸ್ತಾನ ರಾಜ್ಯದ ಪಾಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ , ಒಟವಾಟೋ ಕಿ ಪಾಲಿ ಎಂಬ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಕಳವು ಮಾಡಿದ್ದ 14 ಕೆ.ಜಿ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 9.75 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಒಂದೇ ಮಳೆಗೆ ನಲುಗಿದ ಬೆಂಗಳೂರು, 50 ಜನರ ಪ್ರಾಣ ಉಳಿಸಿದ ಅಗ್ನಿಶಾಮಕ ದಳ
ಈ ಪ್ರಕರಣದಲ್ಲಿ ತಲೆಮರೆಸಿ ಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶೇಖರ್ ಮತ್ತು ಕಬ್ಬನ್ ಪಾರ್ಕ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಾಲಕೃಷ್ಣ ಅವರ ಮಾರ್ಗದರ್ಶನ ಲ್ಲಿ ಇನ್ಸ್‍ಪೆಕ್ಟರ್ ರವಿ ಅವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ತಂಡದ ಉತ್ತಮ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.