ಬೆಂಗಳೂರು, ಫೆ.20- ಜಲ ಜೀವನ ಮಿಷನ್ ಯೋಜನೆಯಡಿ ಮುಂದಿನ ವರ್ಷ ರಾಜ್ಯದ 25 ಲಕ್ಷ ಮನೆಗಳಿಗೆ ನಲ್ಲಿ ಮೂಲಕ ನೀರು ಒದಗಿಸಲು ಅನುಮೋದಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ನಲ್ಲಿ ಮೂಲಕ ಮನೆಗಳಿಗೆ ನೀರು ಒದಗಿಸಲುವ ಯೋಜನೆಗೆ ಬಜೆಟ್ ಅನುದಾನ ಒದಗಿಸಲಾಗಿದೆ. ಉತ್ತಮ ನೀರು ಕೊಟ್ಟಾಗ ಜನರ ಸ್ವಾಸ್ಥ್ಯವೂ ಹೆಚ್ಚುತ್ತದೆ ಎಂದರು.
ಜೂನ್ ತಿಂಗಳೊಳಗೆ 8 ಸಾವಿರ ಶಾಲಾ ಕೊಠಡಿಗಳು ನಿರ್ಮಾಣ : ಸಿಎಂ
ಹಿಂದುಳಿದ ವರ್ಗದ ಎರಡೂವರೆ ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯ ಪಡೆದಿದ್ದಾರೆ. ಹೆಚ್ಚುವರಿ 30 ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು 250 ಕೋಟಿ ರೂ. ಒದಗಿಸಲಾಗಿದೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚೂ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹಾಗೂ ವಿದ್ಯಾಸಿರಿ ಸೌಲಭ್ಯ ಕೊಟ್ಟಿದ್ದೇವೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ರಾಜ್ಯದ 5ಕಡೆ ಮೆಗಾ ಹಾಸ್ಟೆಲ್ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಮುಗಿದೆ. ತಲಾ ಒಂದು ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ದೊರೆಯಲಿದೆ. ಇದು ಹೊಸ ಪರಿಕಲ್ಪನೆಯಾಗಿದ್ದು, ಇನ್ನಷ್ಟು ಮೆಗಾ ಹಾಸ್ಟೆಲ್ ನಿರ್ಮಿಸಲಾಗುವುದು ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರನ್ನು ಮುಖ್ಯವಾಹಿನಿಗೆ ತರಲು ಹಲವು ಕಾರ್ಯಕ್ರಮಗಳಿದ್ದು, ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು ಎಂದು ಹೇಳಿದರು.
Jal Jeevan Mission, CM Bommai,