Tuesday, May 7, 2024
Homeರಾಷ್ಟ್ರೀಯಜಲಿಯನ್ ವಾಲಾಬಾಗ್ ಹುತಾತ್ಮರಿಗೆ ರಾಷ್ಟ್ರಪತಿ, ಪ್ರಧಾನಿ ಶ್ರದ್ಧಾಂಜಲಿ

ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ರಾಷ್ಟ್ರಪತಿ, ಪ್ರಧಾನಿ ಶ್ರದ್ಧಾಂಜಲಿ

ನವದೆಹಲಿ,ಏ.13- ಕಳೆದ 1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಪ್ರಾಣ ಕಳೆದುಕೊಂಡವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮ, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ಸಿಂಗ್ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 1919 ರಲ್ಲಿ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಕೊಲ್ಲಲ್ಪಟ್ಟ ಜನರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಘಟನೆಯನ್ನು ವಿವರಿಸುವ ಮತ್ತು ಬಲಿಪಶುಗಳ ಅಪ್ರತಿಮ ಧೈರ್ಯ ಮತ್ತು ತ್ಯಾಗವನ್ನು ಪ್ರದರ್ಶಿಸುವ ವೀಡಿಯೊವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.

ದೇಶಾದ್ಯಂತ ನನ್ನ ಕುಟುಂಬ ಸದಸ್ಯರ ಪರವಾಗಿ ಜಲಿಯನ್ವಾಲಾ ಬಾಗ್ ಹತ್ಯಾಕಾಂಡದ ಎಲ್ಲಾ ವೀರ ಹುತಾತ್ಮರಿಗೆ ನನ್ನ ಹೃತ್ಪೂರ್ವಕ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹತ್ಯಾಕಾಂಡದ ಸಂತ್ರಸ್ತರನ್ನು ಸ್ಮರಿಸುತ್ತಾ, ಜಲಿಯನ್ ವಾಲಾಬಾಗ್ನಲ್ಲಿ ಮಾತೃಭೂಮಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಹೃತ್ಪೂರ್ವಕ ನಮನಗಳು! ಸ್ವರಾಜ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲಾ ಮಹಾನ್ ಚೇತನಗಳಿಗೆ ದೇಶವಾಸಿಗಳು ಯಾವಾಗಲೂ ಋಣಿಯಾಗಿರುತ್ತಾರೆ. ಆ ಹುತಾತ್ಮರ ದೇಶಭಕ್ತಿಯ ಮನೋಭಾವವು ಮುಂದಿನ ಪೀಳಿಗೆಗೆ ಯಾವಾಗಲೂ ಸೂರ್ತಿ ನೀಡುತ್ತದೆ ಎಂದು ನನಗೆ ಖಾತ್ರಿಯಿದೆ ಎಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ದೇಶದ ಸ್ವಾತಂತ್ರ್ಯ ಚಳವಳಿಗೆ ಅಮೂಲ್ಯ ಕೊಡುಗೆ ನೀಡಿದ ಜಲಿಯನ್ ವಾಲಾಬಾಗ್ನ ವೀರ ಹುತಾತ್ಮರಿಗೆ ನಮನಗಳನ್ನು ಸಲ್ಲಿಸಿದ್ದಾರೆ.

ಜಲಿಯನ್ ವಾಲಾಬಾಗ್ ಬ್ರಿಟಿಷರ ಕ್ರೌರ್ಯ ಮತ್ತು ಅಮಾನವೀಯತೆಯ ಜೀವಂತ ಸಂಕೇತ ವಾಗಿದೆ. ಈ ಹತ್ಯಾಕಾಂಡವು ದೇಶವಾಸಿಗಳ ಹೃದಯದಲ್ಲಿ ಅಡಗಿರುವ ಕ್ರಾಂತಿಕಾರಿ ಜ್ವಾಲೆಯನ್ನು ಜಾಗೃತಗೊಳಿಸಿತು ಮತ್ತು ಸ್ವಾತಂತ್ರ್ಯ ಚಳುವಳಿ ಯನ್ನು ಜನರ ಹೋರಾಟವನ್ನಾಗಿ ಮಾಡಿದೆ.

RELATED ARTICLES

Latest News