ಶ್ರೀನಗರ, ಸೆ 1-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಖಚಿತ ಮಾಹಿತಿ ಪಡೆದು ತಪಾಸಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿ ರಾತ್ರಿ ಸೋಪೋರ್ ಪಟ್ಟಣದ ಬೊಮೈ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ನಡೆಸಿದ ಎನ್‍ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸ್ ಅಕಾರಿಯೊಬ್ಬರು ತಿಳಿಸಿದ್ದಾರೆ.ಗುಂಡಿನ ಚಕಮಕಿಯಲ್ಲಿ ಓರ್ವ ನಾಗರೀಕನಿಗೂ ಗಾಯಗಳಾಗಿವೆ .
ಹತರಾದ ಉಗ್ರರಾದ ಮೊಹಮ್ಮದ್ ರಫಿ ಮತ್ತು ಪುಲ್ವಾಮಾದ ಕೈಸರ್ ಅಶ್ರಫ್ ನಿಷೇತ ಭಯೋತ್ಪಾದಕ ಸಂಘಟನೆ ಜೈಶ್ -ಎ-ಮೊಹಮ್ಮದ್ನೊಂದಿಗೆ ಸಂಬಂಧ ಹೊಂದಿದ್ದು ಇಬ್ಬರೂ ನಾಗರಿಕರ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇಬ್ಬರೂ ಹಲವಾರು ಭಯೋತ್ಪಾದಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಗುಪ್ತಚರ ಮಾಹಿತಿ ಪ್ರಕಾರ ಸೋಪೋರ್ ಪ್ರದೇಶದಲ್ಲಿ ನಾಗರಿಕರ ಮೇಲೆ ದಾಳಿ ಮಾಡಲು ಯೋಜಿಸಿದ್ದರು ಅದನ್ನು ತಡೆದಿದ್ದೇವೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ