ನಾಳೆಯಿಂದ 23ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ

Social Share

ಮೈಸೂರು, ಜ. 17- ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ನಾಳೆಯಿಂದ 23ರ ವರೆಗೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಸುತ್ತೂರಿನಲ್ಲಿ ನಡೆಯಲಿದೆ ಎಂದು ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ, ಹಾಲ್ಹರವಿ ಉತ್ಸವ, ರಥೋತ್ಸವ, ಶ್ರೀ ಮಹದೇಶ್ವರ ಕೊಂಡೋತ್ಸವ, ಲಕ್ಷ ದೀಪೋತ್ಸವ, ತೆಪ್ಪೋತ್ಸವ, ಶ್ರೀ ವೀರಭದ್ರೇಶ್ವರ ಕೊಂಡೋತ್ಸವದೊಂದಿಗೆ ಹಲವಾರು ಧಾರ್ಮಿಕ ಕಾರ್ಯಕ್ರಮ, ವೈವಿಧ್ಯಮಯ ಸಾಂಸ್ಕøತಿಕ, ಶೈಕ್ಷಣಿಕ, ಕ್ರೀಡಾ ಚಟುವಟಿಕೆಗಳು ನಡೆಯಲಿವೆ ಎಂದರು.

ಈ ವರ್ಷ 29ನೆ ರಾಜ್ಯಮಟ್ಟದ ಭಜನಾ ಮತ್ತು ಏಕತಾರಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಇದರಲ್ಲಿ ರಾಜ್ಯ, ಹೊರ ರಾಜ್ಯಗಳಿಂದ 700ಕ್ಕೂ ಹೆಚ್ಚು ಪುರುಷ, ಮಹಿಳಾ, ಮಕ್ಕಳ ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.

ಜಾತ್ರೆಯ ಪ್ರಮುಖ ಆಕರ್ಷಣೆ ವಸ್ತುಪ್ರದರ್ಶನ ಇದ್ದು, ಇಲ್ಲಿ ಕೈಗಾರಿಕೋತ್ಪನ್ನಗಳು, ಕೈಮಗ್ಗ, ಜವಳಿ, ಕರಕುಶಲ, ಗ್ರಾಮೀಣ, ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘಗಳು ತಯಾರಿಸಿದ ಗೃಹಬಳಕೆ ಉತ್ಪನ್ನ ಹಾಗೂ ಗುಡಿ ಕೈಗಾರಿಕೆ ವಸ್ತುಗಳ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಬಿಎಸ್‍ವೈ-ಮೋದಿ ಗೌಪ್ಯ ಮಾತುಕತೆ, ರಾಜ್ಯ ಬಿಜೆಪಿಯಲ್ಲಿ ಸಂಚಲನ

ಜ.19ರಂದು ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಅಂತಜರ್Áತಿ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಸಹ ಪಾಲ್ಗೊಳ್ಳಲಿದ್ದಾರೆ.

ಜಾತ್ರೆ ಸಂದರ್ಭದಲ್ಲಿ ಜ.19 ಮತ್ತು 20ರಂದು ಸುತ್ತೂರಿನಲ್ಲಿ ನೂತನವಾಗಿ ನಿರ್ಮಿಸಿರುವ ರಥದ ಮನೆ, ಶ್ರೀ ಚಿದ್ಘನ ಶಿವಾಚಾರ್ಯ ಕಾಂಪ್ಲೆP್ಸï, ಶ್ರೀ ಪರ್ವತೇಂದ್ರ ಶಿವಾಚಾರ್ಯ ಕಾಂಪ್ಲೆP್ಸï, ಶ್ರೀ ಭಂಡಾರಿ ಬಸಪ್ಪ ಒಡೆಯರ್ ಕಾಂಪ್ಲೆಕ್ಸ್‍ಗಳು ಉದ್ಘಾಟನೆಗೊಳ್ಳಲಿವೆ ಎಂದವರು ಹೇಳಿದರು.

ಒಂದು ಎಕರೆ ಕೃಷಿ ಬ್ರಹ್ಮಾಂಡ, ನೆರಳು ಮನೆಯಲ್ಲಿ ಬೆಳೆದ ಹಲವಾರು ದೇಸಿ ಹಾಗೂ ವಿದೇಶಿ ತರಕಾರಿಗಳು, ಈ ವರ್ಷ ವಿಶೇಷವಾಗಿ ಸಿರಿಧಾನ್ಯ ಬೆಳೆಗಳ ಪ್ರಾತ್ಯಕ್ಷಿಕೆ, ಔಷಧಿ ಬೆಳೆಯಾಗಿ ಲಾವಂಚ, ದ್ವಿದಳ ಧಾನ್ಯಗಳ ವಿವಿಧ ತಳಿಗಳ ಪ್ರದರ್ಶನ ಮಾಡಲಾಗಿದೆ.

ರೈತರ ಅನುಕೂಲಕ್ಕೆ ನೂತನ ತಂತ್ರಜ್ಞಾನ ಡ್ರೋಣ್ ಬಳಕೆ ಕುರಿತು ಪ್ರಾತ್ಯಕ್ಷಿಕೆ ಏರ್ಪಡಿಸಲಾಗುತ್ತದೆ. ಹಸು, ಕುರಿ, ಮೇಕೆ, ಕೋಳಿಗಳ ದೇಸಿ ತಳಿಗಳ ಪ್ರದರ್ಶನವನ್ನು ಆಯೋಗಿಸಲಾಗಿದೆ ಎಂದರು. ಈ ವರ್ಷ ವಿಶ್ವ ಸಿರಿಧಾನ್ಯ ವರ್ಷ ಪ್ರಯುಕ್ತ ವಿಶೇಷವಾಗಿ ಸಿರಿಧಾನ್ಯ ಮೇಳ ಏರ್ಪಡಿಸಲಾಗಿದೆ.ಇದರೊಂದಿಗೆ ಸಿರಿಧಾನ್ಯ ತಿನಿಸುಗಳ ಸ್ಪರ್ಧೆ.

ಮನೆಯಲ್ಲೇ ತಯಾರಿಸಿಕೊಂಡು ಬರುವ ಉತ್ತಮ ಖಾದ್ಯಗಳಿಗೆ ಬಹುಮಾನ ನೀಡಲಾಗುತ್ತದೆ ಎಂದರು.
ವಸ್ತುಪ್ರದರ್ಶನ ಆವರಣದಲ್ಲಿ ಸಿರಿಧಾನ್ಯ ಉತ್ಪನ್ನಗಳ ಸವಿರುಚಿ ಖಾದ್ಯಗಳ ಮಾರಾಟ ಮಳಿಗೆಗಳು ಇರುತ್ತವೆ ಎಂದು ಹೇಳಿದರು.

ಗ್ರಾಮೀಣ ಕಲೆಗಳಾದ ಸೋಬಾನೆ ಪದ ಹಾಗೂ ರಂಗೋಲಿ ಸ್ಪರ್ಧೆ ನಾಳೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಳಿಪಟ ಸ್ಪರ್ಧೆ ಜ.21ರಂದು ಏರ್ಪಡಿಸಲಾಗಿದೆ. ಜಾತ್ರೆಯ ಮತ್ತೊಂದು ಆಕರ್ಷಣೆಯಾದ ಕುಸ್ತಿ ಪಂದ್ಯಾವಳಿ 22ರಂದು ನಡೆಯಲಿದೆ ಎಂದರು.

ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆ ವಿಜೇತರಿಗೆ ಸುತ್ತೂರು ಕೇಸರಿ, ಸ್ಥಳೀಯ ಉತ್ತಮ ಕುಸ್ತಿ ಸ್ಪರ್ಧೆ ವಿಜೇತರಿಗೆ ಸುತ್ತೂರು ಕುಮಾರ ಪ್ರಶಸ್ತಿ ನೀಡಲಾಗುತ್ತದೆ. 18ರಿಂದ 20ರವರೆಗೆ 3 ದಿನಗಳ ಕಾಲ ಕ್ಯಾನ್ಸರ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಜಾತ್ರಾ ಮಹೋತ್ಸವದ ಎಲ್ಲಾ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಸಾರ್ವಜನಿಕರ ಮನರಂಜನೆಗಾಗಿ ಜಾತ್ರೆಯ ಎಲ್ಲ ದಿನಗಳಲ್ಲಿ ದೋಣಿ ವಿಹಾರ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

23 ಲಕ್ಷ ಹೋಟೆಲ್ ಬಿಲ್ ಪಾವತಿಸದೆ ಪರಾರಿಯಾದ ರಾಜಮನೆತನದ ಉದ್ಯೋಗಿ

ದೇಸಿ ಆಟಗಳಾದ ಕೆಸರುಗದ್ದೆ ಓಟ, ಹಗ್ಗ-ಜಗ್ಗಾಟ, ಕುಂಟೆಬಿಲ್ಲೆ, ಅಳಿಗುಳಿ ಮನೆ, ಅಣ್ಣೆಕಲ್ಲು, ಚದುರಂಗ, ಚೌಕಬಾರ ಜೊತೆಗೆ 50 ಕೆಜಿ ತೂಕದ ಚೀಲ ಹೊತ್ತು ಓಡುವುದು, ಕಲ್ಲುಗುಂಡು ಎತ್ತುವುದು, ನೀರು ತುಂಬಿದ ಬಿಂದಿಗೆ ತಲೆ ಮೇಲೆ ಹೊತ್ತು ಓಡುವುದು ಸೇರಿದಂತೆ ಹಲವು ದೇಸಿ ಆಟಗಳ ಸ್ಪರ್ಧೆ ಜ.21ರಂದು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಗದ್ದುಗೆ ಆವರಣದಲ್ಲಿ ನಗರ ಪ್ರದೇಶಗಳ ವೃತ್ತಿಪರ ಹಾಗೂ ಹವ್ಯಾಸಿ ಕಲಾವಿದರ ಗಾಯನ, ನೃತ್ಯ ಹಾಗೂ ನಾಟಕಗಳಿರುತ್ತವೆ. ವಸ್ತು ಪ್ರದರ್ಶನ ಆವರಣದಲ್ಲಿ ಪ್ರತಿದಿನ ಸಂಜೆ 7ರಿಂದ 9ರ ವರೆಗೆ ವಿಶೇಷ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಹೊರಗಿನ ಕಲಾವಿದರು ನೀಡುತ್ತಾರೆ.

ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವ ಸಮಸ್ತ ಭಕ್ತಾದಿಗಳಿಗೆ ಪ್ರತಿನಿತ್ಯವೂ ಬೆಳಗ್ಗೆ ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದದ ವ್ಯವಸ್ಥೆ ಇರುತ್ತದೆ ಎಂದು ಹೇಳಿದರು. ಸುದ್ದಿಗೊಷ್ಠಿಯಲ್ಲಿ ಜೆಎಸ್‍ಎಸ್ ಮಹಾವಿದ್ಯಾಪೀಠದ ಬೆಟಸೂರ್ ಮಠ, ಶಿವಕುಮಾರ್ ಮತ್ತಿತರರಿದ್ದರು.

Jatra Mahotsav, Suttur, Sri Kshetra, January18,

Articles You Might Like

Share This Article