ನಾಗಮಂಗಲ,ಫೆ.27- ಆಧ್ಯಾತ್ಮಿಕ ಕ್ಷೇತ್ರ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಾಳೆಯಿಂದ ಮಾ.8ರವರೆಗೆ ಜಾತ್ರೋತ್ಸವ ನಡೆಯಲಿದೆ. ನಾಳೆ ಬೆಳಗ್ಗೆ 6 ಗಂಟೆಗೆ ಶ್ರೀಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ, ಧಾರ್ಮಿಕ ಕೈಂಕರ್ಯಗಳು ನಡೆದ ನಂತರ 8 ಗಂಟೆಗೆ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಧ್ವಜಾರೋಹಣ ಮಾಡುವುದರ ಮೂಲಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ.
ಮಾ. 1ರಂದು ಮಧ್ಯಾಹ್ನ ಕಬಡಿ ಪಂದ್ಯಾವಳಿ ನಡೆಯಲಿದ್ದು, ಸಂಜೆ 6 ಗಂಟೆಗೆ ಸರ್ವಾಲಂಕೃತ ಚಂದ್ರಮೌಳೇಶ್ವರ ಸ್ವಾಮೀಜಿ ಉತ್ಸವ ನಡೆಯಲಿದ್ದು, ಮಾ. 2ರಂದು ಮಧ್ಯಾಹ್ನ 3 ಗಂಟೆಗೆ ಮಲ್ಲೇಶ್ವರ ಸ್ವಾಮಿ ಉತ್ಸವ ಸಂಪನ್ನಗೊಳ್ಳಲಿದೆ.
ಮಾ. 3ರಂದು ಸರಳ ಸಾಮೂಹಿಕ ವಿವಾಹ ನೆರವೇರಲಿದೆ. ಇದೇ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಆಚರಿಸಿಕೊಂಡ ಹಿರಿಯ ದಂಪತಿಗಳಿಗೆ ಸನ್ಮಾನಿಸಲಾಗುತ್ತದೆ. ಮಾ. 4ರಂದು ಕಾಲಭೈರವೇಶ್ವರ ಸ್ವಾಮಿಗೆ ಸುವರ್ಣ ಕವಚಾಲಂಕಾರ ಪೂಜೆ ನೆರವೇರಲಿದ್ದು, ಸಂಜೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವ ನೆರವೇರಲಿದೆ.
ಭಾರತದ ಅಭಿವೃದ್ಧಿಯನ್ನು ಶ್ಲಾಘಿಸಿದ ಅಮೆರಿಕಾದ ಅನಿವಾಸಿ ಭಾರತೀಯರು
ಮಾ. 5ರಂದು ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಲಿದ್ದು, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಜ್ವಾಲಪೀಠರೋಹಣ, ಸಿದ್ದಸಿಂಹಾಸನ ಪೂಜೆ, ರಾತ್ರಿ 8 ಗಂಟೆ ಚಂದ್ರಮಂಡಲೋತ್ಸವ ನಡೆಯಲಿದೆ.
ಅಂದು ಸಂಜೆ 6 ಗಂಟೆಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ಮಾ. 7ರಂದು ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವ ಹಾಗೂ 8 ರಂದು ಸಭಾಕಾರ್ಯಕ್ರಮದ ಮೂಲಕ ಜಾತ್ರಾಮಹೋತ್ಸವಕ್ಕೆ ತೆರೆ ಬೀಳಲಿದೆ.
Jatra, Mahotsava, Adichunchanagiri,