ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ ವಿಸ್ತರಣೆ

Social Share

ಬೆಂಗಳೂರು,ಜು.19- ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಹಾಗೂ ಖ್ಯಾತ ಹೃದಯ ತಜ್ಞ ಡಾ.ಮಂಜುನಾಥ್ ಅವರ ಸೇವಾವಧಿಯನ್ನು ಪುನಃ ಒಂದು ವರ್ಷಕ್ಕೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿರ್ದೇಶಕರಾಗಿ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಪುನಃ ಅವರನ್ನೇ ಮುಂದುವರಿಸುವಂತೆ ಕೆಲವರು ಮನವಿ ಮಾಡಿಕೊಂಡಿದ್ದರು. ಹೀಗಾಗಿ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದೆ.

ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖುದ್ದಾಗಿ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಡಾ. ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿತ್ತು. ತಮ್ಮ ಸೇವಾವ ವಿಸ್ತರಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಮಂಜುನಾಥ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್.ಮಂಜುನಾಥ್ ಅವರ ಅವಧಿ ಮುಗಿದಿತ್ತು. ಅವರನ್ನೇ ಮುಂದುವರಿಸಬೇಕು ಎಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ವ್ಯಕ್ತವಾಗಿತ್ತು. ಮಂಜುನಾಥ್ ಅವರನ್ನು ಮುಂದುವರಿಸುವಂತೆ ಅನೇಕ ಕಡೆ ಪ್ರತಿಭಟನೆಗೂ ಕರೆ ನೀಡಲಾಗಿತ್ತು. ಅಷ್ಟರಲ್ಲೇ ಎಚ್ಚೆತ್ತ ಸರ್ಕಾರ ಸೇವಾವಧಿ ವಿಸ್ತರಿಸಿದೆ.

ಹಾಲಿ ನಿರ್ದೇಶಕರನ್ನು ಮುಂದುವರಿಸಬೇಕೋ ಅಥವಾ ಹೊಸ ನಿರ್ದೇಶಕರ ನೇಮಕ ಮಾಡಬೇಕು ಎಂಬ ವಿಚಾರದಲ್ಲಿ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಈ ಸಂಬಂಧ ಡಾ.ಮಂಜುನಾಥ್‍ರನ್ನೇ ಮುಂದುವರಿಸುವಂತೆ ಸುಧಾಮೂರ್ತಿ ಸೇರಿದಂತೆ ಹಲವು ಗಣ್ಯರು ಸರ್ಕಾರದ ಮೇಲೆ ಒತ್ತಡ ಹಾಕಿದ್ದರು.

ಡಾ.ಮಂಜುನಾಥ್ ನಿರ್ದೇಶಕ ಸ್ಥಾನದಲ್ಲಿ ಮುಂದುವರಿಸುವಂತೆ ಸಿಬ್ಬಂದಿ ವರ್ಗ ಪ್ರತಿಭಟನೆ ಮಾಡಲು ಮುಂದಾಗಿತ್ತು. ಸರ್ಕಾರ ಡಾ. ಮಂಜುನಾಥ್ ಸೇವೆ ಮುಂದುವರಿಸಬೇಕು ಎಂದು ಸಿಬ್ಬಂದಿ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದರು.
ಒಪಿಡಿಗೆ ಸಮಸ್ಯೆಯಾಗದಂತೆ ನಾಳೆ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿಯಮದ ಪ್ರಕಾರ ಗರಿಷ್ಠ 70 ವರ್ಷದ ವರೆಗೂ ಸೇವೆ ಸಲ್ಲಿಸಬಹುದು. ಆದರೆ ಸದ್ಯ ಡಾ. ಮಂಜುನಾಥ್ ಅವರಿಗೆ 65 ವರ್ಷ ಮಾತ್ರ. ಹೀಗಾಗಿ ಇನ್ನಷ್ಟು ವರ್ಷ ಅವರನ್ನು ನಿರ್ದೇಶಕರಾಗಿ ಮುಂದುವರೆಸಬೇಕು ಒತ್ತಾಯ ಕೇಳಿ ಬಂದಿತ್ತು.

Articles You Might Like

Share This Article