ಜಯನಗರ ವಾಣಿಜ್ಯ ಮಳಿಗೆಗಳ ಅಕ್ರಮ ಹಂಚಿಕೆ: ಸಿಐಡಿ ತನಿಖೆಗೆ ಎನ್.ಆರ್.ರಮೇಶ್ ಆಗ್ರಹ

Social Share

ಬೆಂಗಳೂರು,ಫೆ.27- ಜಯನಗರ ವಾಣಿಜ್ಯ ಸಂಕೀರ್ಣದಲ್ಲಿರುವ 312 ಮಳಿಗೆಗಳನ್ನು ಕಾನೂನಬಾಹಿರವಾಗಿ ಹಂಚಿಕೆ ಮಾಡಲಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿರುವ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಸರ್ಕಾರ ಈ ಕೂಡಲೆ ಹಗರಣದ ಬಗ್ಗೆ ಸಿಐಡಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಹಗರಣ ಕುರಿತಂತೆ ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡವಿದೆ ಎಂದು ಆರೋಪಿಸಿದರು.

ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಈ ಹಿಂದೆ ಇದ್ದಂತಹ ವಾಣಿಜ್ಯ ಮಳಿಗೆಗಳಿದ್ದ ಹಳೆಯ ಕಟ್ಟಡವನ್ನು ತೆರವುಗೊಳಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಹೊಸ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗಿದೆ.

ಹಳೆ ಕಟ್ಟಡದಲ್ಲಿದ್ದ 132 ವ್ಯಾಪಾರಿಗಳಿಗೆ ಮಾತ್ರ ಹೊಸ ಮಳಿಗೆ ಹಂಚಿಕೆ ಮಾಡಬೇಕು ಎಂಬ ನಿಯಮವಿದ್ದರೂ ಬಿಬಿಎಂಪಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳ ಪ್ರಭಾವಕ್ಕೆ ಒಳಗಾಗಿ ಬೃಹತ್ ಹಗರಣ ನಡೆಸಿದ್ದಾರೆ ಎಂದು ರಮೇಶ್ ದೂರಿದ್ದಾರೆ.

ವಾಣಿಜ್ಯ ಸಂಕೀರ್ಣದಲ್ಲಿ 312 ಅಕ್ರಮ ಮಳಿಗೆಗಳನ್ನು ನಿರ್ಮಿಸಿ, ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಹತ್ತಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಲಾಗಿದೆ.

ಕರ್ನಾಟಕದ ಅಭಿವೃದ್ಧಿಯಗೆ ಡಬಲ್ ಇಂಜಿನ್ ಸರ್ಕಾರ ಅನಿವಾರ್ಯ: PM ಮೋದಿ

2013ರಲ್ಲಿ ಹೈಕೋರ್ಟ್ ಎಲ್ಲಾ ಮಳಿಗೆಗಳನ್ನ ನಿಯಮಾನುಸಾರ ಟೆಂಡರ್ ಆಹ್ವಾನಿಸಿ ಅರ್ಹತೆ ಇರುವ ಅರ್ಜಿದಾರರಿಗೆ ಮಾತ್ರ ಹಂಚಿಕೆ ಮಾಡುವಂತೆ ಆದೇಶಿಸಿತ್ತು. ಆದರೂ 312 ಮಳಿಗೆಗಳನ್ನು ಹೆಚ್ಚುವರಿಯಾಗಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ನಿರ್ಮಿಸಿ ತಮಗಿಷ್ಟ ಬಂದವರಿಗೆ ಹಂಚಿಕೆ ಮಾಡಿರುವ ಪಾಲಿಕೆಯ ಮಾರುಕಟ್ಟೆ ವಿಭಾಗದ ಅಧಿಕಾರಿಗಳು ಕರ್ಮಕಾಂಡ ನಡೆಸಿದ್ದಾರೆ.

ಒಂದೊಂದು ಮಳಿಗೆಗೆ 25 ರಿಂದ 30 ಲಕ್ಷ ಹಣ ವಸೂಲಿ ಮಾಡಲಾಗಿದೆ. ಮಾಜಿ ನಗರಸಭೆ ಸದಸ್ಯೆ ಲತಾ ವೆಂಕಟೇಶ್, ಪತಿ ವೆಂಕಟೇಶ್ ಮತ್ತು ಅವರ ಕುಟುಂಬದ ಸದಸ್ಯರ ಹೆಸರುಗಳಲ್ಲಿ ಒಟ್ಟು 13 ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಮಾಹಿತಿ ಬಿಡುಗಡೆ ಮಾಡಿದರು. ಹಾಗೆಯೇ ಪ್ರಭಾವೀ ರಾಜಕಾರಣಿಯೊಬ್ಬರ ಶಿಫಾರಸ್ಸು ಪತ್ರಕ್ಕೆ ಸ್ಪಂದಿಸಿ, ಉಮೇಶ್ ಎಂಬ ಒಬ್ಬನೇ ವ್ಯಕ್ತಿಯ ಹೆಸರಿಗೆ 04 ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ದೂರಿದರು.

ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು 312 ಅಧಿಕ ವಾಣಿಜ್ಯ ಮಳಿಗೆಗಳನ್ನು ಹಂಚಿಕೆ ಮಾಡಿ ಹತ್ತಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆಸಿರುವ ಈ ಬೃಹತ್ ಹಗರಣವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ಬಿಎಸ್‍ವೈಗೆ ಮೋದಿ ಬಹುಪರಾಕ್

ಹತ್ತಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿರುವ ಈ ಹಗರಣಕ್ಕೆ ಸಂಬಂಧಿಸಿದಂತೆ, ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು 312 ಅಧಿಕ ವಾಣಿಜ್ಯ ಮಳಿಗೆಗಳನ್ನು ಹಂಚಿಕೆ ಮಾಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ದಕ್ಷಿಣ ವಲಯದ ಜಂಟಿ ಆಯುಕ್ತರಾಗಿದ್ದ ವೀರಭದ್ರಸ್ವಾಮಿ,

ಪಾಲಿಕೆಯ ಮಾರುಕಟ್ಟೆ ವಿಭಾಗದ ಉಪ ಆಯುಕ್ತರಾಗಿದ್ದ ಹೇಮಂತ್ ಶರಣ್, ನಾಗೇಂದ್ರ ನಾಯಕ್, ಮುರಳೀಧರ್, ಪಾಲಿಕೆಯ ಮಾರುಕಟ್ಟೆ ವಿಭಾಗದ ಕಂದಾಯ ಅಧಿಕಾರಿಗಳಾದ ವರಲಕ್ಷ್ಮಿ, ಮಂಜುಳ ಹಾಗೂ ಸಹಾಯಕ ಕಂದಾಯ ಅಧಿಕಾರಿಗಳಾದ ಕಾಂಚನಾ ಮತ್ತು ಶಿವಕುಮಾರ್ ಅವರುಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿದ್ದು ತಪ್ಪಿತಸ್ಥರ ವಿರುದ್ಧ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್‍ಗಿರಿನಾಥ್ ಅವರು ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Jayanagar, commercial, shops, Illegal, allotment, NR Ramesh,

Articles You Might Like

Share This Article