Sunday, July 21, 2024
Homeರಾಜ್ಯರಾಮನಗರದ ಕಂದಾಯ ಭವನದ ಬಳಿ ಹೈಡ್ರಾಮ, ಲಘು ಲಾಠಿ ಪ್ರಹಾರ

ರಾಮನಗರದ ಕಂದಾಯ ಭವನದ ಬಳಿ ಹೈಡ್ರಾಮ, ಲಘು ಲಾಠಿ ಪ್ರಹಾರ

ಬೆಂಗಳೂರು,ಜು.9– ರಾಮನಗರ ತಾಲ್ಲೂಕಿನ ಹಳ್ಳಿಮಾಳದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿರುವುದನ್ನು ಖಂಡಿಸಿ, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ರಾಮನಗರ ಕಂದಾಯ ಭವನದ ಬಳಿ ಪ್ರತಿಭಟನೆ ನಡೆಸಿದಾಗ ಉದ್ವಿಗ್ನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಲಾಗಿದೆ.

ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ರಾಜಕೀಯ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ವೇಳೆ ಕಂದಾಯ ಭವನದಲ್ಲಿ ಇರುವ ಸಹಕಾರ ಇಲಾಖೆಯ ನಿರ್ಬಂಧಕರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ತಳ್ಳಾಟ ನೂಕಾಟ ಉಂಟಾಯಿತು.ಪೊಲೀಸರು ಮತ್ತು ಪ್ರತಿಭಟನಾನಿರತರ ನಡುವೆ ವಾಗ್ವಾದ ಉಂಟಾಯಿತು.

ಕಚೇರಿಗೆ ಮುತ್ತಿಗೆ ಹಾಕುವುದನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಾಗ ಪ್ರತಿಭಟನಾನಿರತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಲಾಯಿತು. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪ್ರತಿಭಟನಾ ನಿರತರ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News