ಬೆಂಗಳೂರು, ನ.10-ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಆದೇಶ ಹೊರಡಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿದೆ. ಪ್ರಮುಖರ ಸಮಿತಿ (ಕೋರ್ ಕಮಿಟಿ) ರಚಿಸಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಮಾಜಿ ಉಪ ಸಭಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರು ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿದ್ದಾರೆ. ಶಿಸ್ತುಪಾಲನಾ ಸಮಿತಿ ಅಧ್ಯಕರಾಗಿ ಮಾಜಿ ಸಚಿವ ಡಿ. ನಾಗರಾಜಯ್ಯ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ ಎಸ್ ವಿ ದತ್ತ ಅವರನ್ನು ನೇಮಿಸಲಾಗಿದೆ.

