ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಸಜ್ಜು

Social Share

ಬೆಂಗಳೂರು,ಆ.7- ಬಿಬಿಎಂಪಿ ಚುನಾವಣೆ ಎದುರಿಸಲು ಸಜ್ಜಾಗುತ್ತಿರುವ ಜೆಡಿಎಸ್ ಚುನಾವಣಾ ಸಮಿತಿ ಹಾಗೂ ಪ್ರಣಾಳಿಕೆ ಸಮಿತಿಗಳನ್ನು ರಚನೆ ಮಾಡಿದೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ಮಂಜುನಾಥ್ ಅಧ್ಯಕ್ಷತೆಯಲ್ಲಿ 11 ಮಂದಿ ಸದಸ್ಯರನ್ನೊಳಗೊಂಡ ಬಿಬಿಎಂಪಿ ಚುನಾವಣಾ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ.

ವಿಧಾನಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಚುನಾವಣಾ ಪ್ರಣಾಳಿಕೆ ಸಮತಿಯನ್ನು ರಚಿಸಲಾಗಿದ್ದು ಐವರು ಸದಸ್ಯರನ್ನು ನೇಮಿಸಲಾಗಿದೆ. ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್. ಪ್ರಕಾಶ್ ಎರಡೂ ಸಮಿತಿಗಳನ್ನು ರಚನೆ ಮಾಡಿದ್ದಾರೆ. ಪ್ರಣಾಳಿಕೆ ಸಮಿತಿಯ ಸಂಚಾಲಕರಾಗಿ ಕೆ.ವಿ.ನಾರಾಯಣಸ್ವಾಮಿ, ಸದಸ್ಯರಗಿ ಸಿ.ರಾಜಣ್ಣ, ಎಸ್.ರಮೇಶ್, ಎಚ್.ಎಂ.ದೇವರಾಜು, ಸುಮಿತ್ರ ಹಾಗೂ ಶೈಲ ಅವರನ್ನು ನೇಮಕ ಮಾಡಲಾಗಿದೆ.

ಚುನಾವಣಾ ಉಸ್ತುವಾರಿ ಸಮಿತಿಯ ಸಂಚಾಲಕರಾಗಿ ಆರ್.ಪ್ರಕಾಶ್, ಸಮಿತಿ ಸದಸ್ಯರಾಗಿ ವಿಧಾನಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನಪರಿಷತ್ ಸದಸ್ಯ ಎಚ್.ಎಂ.ರಮೇಶ್ ಗೌಡ, ನಗರ ಮಹಿಳಾ ವಿಭಾಗದ ಅಧ್ಯಕ್ಷ ರೂತ್ ಮನೋರಮ, ರಾಜ್ಯ ಕೋರ್ ಕಮಿಟಿ ಸದಸ್ಯ ಟಿ.ಎ.ನಾರಾಯಣಸ್ವಾಮಿ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶಂಶುಲ್ ಹಕ್ ಖಾನ್, ಬಿಬಿಎಂಪಿ ಮಾಜಿ ಸದಸ್ಯ ಇಮ್ರಾನ್ ಪಾಷಾ, ದೆಹಲಿಯ ವಿಶೇಷ ಮಾಜಿ ಪ್ರತಿನಿ ಸಯ್ಯದ್ ಮೊಹಿದ್ ಅಲ್ತಾಫ್ ಅವರನ್ನು ನೇಮಕ ಮಾಡಲಾಗಿದೆ.

Articles You Might Like

Share This Article