ಜೆಡಿಎಸ್‌‍-ಬಿಜೆಪಿ ಒಟ್ಟಾಗಿ ಪೆನ್‌ಡ್ರೈವ್‌ ಪ್ರಕರಣ ಮುಚ್ಚಿಹಾಕಲು ಯತ್ನ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು,ಮೇ 16- ಪೆನ್‌ಡ್ರೈವ್‌ ಪ್ರಕರಣದ ಬಳಿಕವೂ ಜೆಡಿಎಸ್‌‍-ಬಿಜೆಪಿ ಮೈತ್ರಿ ವಿಧಾನಪರಿಷತ್‌ ಚುನಾವಣೆಯಲ್ಲೂ ಮುಂದುವರೆದಿದೆ ಎಂದರೆ ಎರಡೂ ಪಕ್ಷಗಳು ಒಟ್ಟಾಗಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಪ್ರಕರಣ ಬಯಲಿಗೆ ಬಂದಿತ್ತು. ಅನಂತರ ಬಹುಷಃ ಬಿಜೆಪಿಯವರು ಜೆಡಿಎಸ್‌‍ನಿಂದ ಅಂತರ ಕಾಯ್ದುಕೊಳ್ಳಬಹುದು ಎಂಬ ಲೆಕ್ಕಾಚಾರಗಳಿದ್ದವು. ಆದರೆ ವಿಧಾನಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಮುಂದುವರೆದಿದೆ. ಬಿಜೆಪಿ, ಜೆಡಿಎಸ್‌‍ಗೆ ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಇದರರ್ಥ ಬಿಜೆಪಿಗೆ ಅಧಿಕಾರ ಮುಖ್ಯವೇ … Continue reading ಜೆಡಿಎಸ್‌‍-ಬಿಜೆಪಿ ಒಟ್ಟಾಗಿ ಪೆನ್‌ಡ್ರೈವ್‌ ಪ್ರಕರಣ ಮುಚ್ಚಿಹಾಕಲು ಯತ್ನ : ಪ್ರಿಯಾಂಕ್‌ ಖರ್ಗೆ