ಪಕ್ಷಾಂತರ ಮಾಡದಂತೆ ಜೆಡಿಎಸ್ ಅಭ್ಯರ್ಥಿಗಳಿಂದ ಆಣೆ ಪ್ರಮಾಣ

Social Share

ಮುಳಬಾಗಿಲು, ನ.1- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳಾಗಿ ಸ್ರ್ಪಸುವವರಿಗೆ ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಸುಮಾರು 100 ಅಭ್ಯರ್ಥಿಗಳ ಪಟ್ಟಿ ಸಿದ್ದವಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಲಹೆ ಪಡೆದು ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಗೆದ್ದ ನಂತರ ಯಾವುದೇ ಆಸೆ ಆಮೀಷಕ್ಕೆ ಒಳಗಾಗಿ ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರಮಾಣ ವಚನ ಮಾಡಿಸಲು ಉದ್ದೇಶಿಸಲಾಗಿದೆ.

ಇಂದು ಸಮಾರಂಭದಲ್ಲಿ ಈ ಪ್ರಮಾಣವಚನ ಅಭ್ಯರ್ಥಿಗಳು ಸ್ವೀಕರಿಸಬೇಕಿತ್ತು. ಆದರೆ ಮನೆ ಮನೆಗಳಿಗೆ ಕನ್ನಡ ಬಾವುಟ ಅಭಿಯಾನ ಹಮ್ಮಿಕೊಂಡಿರುವುದರಿಂದ ಎಲ್ಲರೂ ಸಮಾರಂಭಕ್ಕೆ ಬರಲು ಸಾಧ್ಯವಾಗಿಲ್ಲ.

ಹೀಗಾಗಿ ಎರಡುಮೂರು ದಿನಗಳ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕೆ ಅಥವಾ ಇಂದೇ ಮಾಡಬೇಕೆ ಎಂಬುದರ ಬಗ್ಗೆ ಗೌಡರ ಸಲಹೆ ಪಡೆಯಲಾಗುವುದು ಎಂದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಸುವ ಗುರಿಯನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ.

ನಮ್ಮ ಪಕ್ಷದ ಟೀಕಾಕಾರರಿಗೆ ಜನರ ಮೂಲಕವೇ ಉತ್ತರ ನೀಡಲಾಗುವುದು. ಮುಂದಿನ ಚುನಾವಣೆಯಲ್ಲಿ ನಾಡಿನ ಜನರು ಸ್ವಂತ ಶಕ್ತಿಯ ಮೇಲೆ ಜೆಡಿಎಸ್ಗೆ ಅಕಾರ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಕೋಲಾರದಿಂದ ಸ್ಪರ್ಧೆ ಮಾಡುವಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದು, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಈ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಗೆಲುವು ಸಾಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮ ಉದ್ದೇಶ ರಾಜ್ಯದಲ್ಲಿ ಕನ್ನಡಿಗರ ಜನಪರ ಸರ್ಕಾರ ಮಾಡುವುದಾಗಿದೆ. ಅದಕ್ಕಾಗಿ ಇಂದಿನಿಂದ ಪಂಚರತ್ನ ರಥಯಾತ್ರೆಯ ಮೂಲಕ ಪಕ್ಷದ ಭರವಸೆಯ ಜೊತೆಗೆ ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು ಎಂದರು.

Articles You Might Like

Share This Article