ಹೃದಯಾಘಾತದಿಂದ ಸಿಂದಗಿ ಜೆಡಿಎಸ್ ಅಭ್ಯರ್ಥಿ ನಿಧನ

Social Share

ಬೆಂಗಳೂರು, ಜ.21- ಸಿಂದಗಿ ವಿಧಾನಸಭಾ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಸೋಮಜ್ಯಾಳ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ ಮತ್ತು ಪುತ್ರಿ ಅವರನ್ನು ಅಗಲಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅವರನ್ನು ಘೋಷಣೆ ಮಾಡಲಾಗಿತ್ತು. ನಿನ್ನೆ ಮಧ್ಯಾಹ್ನ ನಾಗಠಾಣ ಕ್ಷೇತ್ರದ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದರು. ಪಕ್ಷದ ಕಾರ್ಯಕ್ರಮ ಮುಗಿಸಿ ನಿನ್ನೆ ರಾತ್ರಿ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು.

ತಡ ರಾತ್ರಿತೀವ್ರವಾಗಿ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ್ ಅವರನ್ನು ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

16 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ನಂತರ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಅವರು ಇತ್ತೀಚೆಗೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಮುಂಬರುವ ವಿಧಾನ ಸಭೆ ಚುನಾವಣೆಗೆ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದರು.

ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ತಲೆದಂಡ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜನವರಿ18ರಂದು ಸಿಂದಗಿಯಲ್ಲಿ ನಡೆದ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಪಾಟೀಲ್ ಸಕ್ರಿಯವಾಗಿ ಪಾಲ್ಗೊಂಡಿದ್ದರು. ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಸೋಮಜ್ಯಾಳ ಗ್ರಾಮದವರಾಗಿದ್ದ ಅವರು, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಪಾಟೀಲ್ ಅವರ ಹುಟ್ಟೂರು ಸೋಮಾಜಾಳಕ್ಕೆ ತೆರಳಿರುವ ಕುಮಾರಸ್ವಾಮಿ ಅವರು, ಮೃತರ ಕಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಪಾಟೀಲರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ಗೌರವ ಸೂಚಿಸಿದ್ದಾರೆ.

ಸಂತಾಪ: ಶಿವಾನಂದ ಪಾಟೀಲ ಅವರ ಅಕಾಲಿಕ ನಿಧನಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿವಾನಂದ ಪಾಟೀಲ್ ಮೃತಪಟ್ಟಿರುವ ಸುದ್ದಿ ಬೇಸರ ಮೂಡಿಸಿದೆ ಎಂದು ಗೌಡರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಮೃತರ ಕುಟುಂಬದವರಿಗೆ ಅಗಲಿಕೆ ದುಃಖ ಭರಿಸುವ ಶಕ್ತಿ ಹಾಗೂ ಮೃತರ ಆತ್ಮಕ್ಕೆ ಚಿರ ಶಾಂತಿ ಕೋರಿದ್ದಾರೆ.

ಸಿಂದಗಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಅವರ ಅಕಾಲಿಕ ಮರಣ ನನಗೆ ತೀವ್ರ ಆಘಾತ ಉಂಟು ಮಾಡಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆಗೆ ಹರಿದು ಬಂದ ಭಕ್ತ ಸಾಗರ

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜ.18ರಂದು ಇಡೀ ದಿನ ಅವರು ನನ್ನೊಂದಿಗೆ ಸಿಂದಗಿ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮರುದಿನ ಯಾತ್ರೆಯೊಂದಿಗೆ ನನ್ನನ್ನು ಆತ್ಮೀಯವಾಗಿ ದೇವರ ಹಿಪ್ಪರಗಿ ಕ್ಷೇತ್ರಕ್ಕೆ ಬೀಳ್ಕೊಟ್ಟಿದ್ದರು. ಸೇನೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತಿ ಪಡೆದಿದ್ದ ಪಾಟೀಲರು, ಸಮಾಜ ಸೇವೆಯ ಅದಮ್ಯ ಹಂಬಲ ಹೊಂದಿದ್ದರು.

ಅತ್ಯುತ್ತಮ ಸಂಘಟನಾ ಶಕ್ತಿ, ಕ್ರಿಯಾಶೀಲತೆ ಹೊಂದಿದ್ದ ಅವರು ಪರಿಚಯವಾದ ಅಲ್ಪಕಾಲದಲ್ಲಿಯೇ ನನಗೆ ಅತ್ಯಂತ ಆತ್ಮೀಯರಾಗಿದ್ದರು. ಶಿವಾನಂದ ಪಾಟೀಲರ ಅಗಲಿಕೆ ನನಗೆ ವೈಯಕ್ತಿಕವಾಗಿ ಅತೀವ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

JDS, candidate, Shivananda Patil, passes, away, due, heart attack,

Articles You Might Like

Share This Article