ಅಧಿವೇಶನಕ್ಕೂ ಮುನ್ನ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

Social Share

ಬೆಂಗಳೂರು, ಫೆ.4- ಮುಂಬರುವ ವಿಧಾನಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನಕ್ಕೂ ಮುನ್ನ ಪ್ರಕಟವಾಗುವ ನಿರೀಕ್ಷೆಯಿದೆ. ಮೊದಲ ಹಂತದಲ್ಲಿ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಈ ಅಭ್ಯರ್ಥಿಗಳಿಗೆ ಚುನಾವಣೆ ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಫೆ. 8ರಿಂದ ಮತ್ತೆ ಪಂಚರತ್ನ ರಥ ಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರಾರಂಭಿಸಲಾಗುತ್ತದೆ. ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಯ ಆಯ್ದ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳಲಾಗುತ್ತದೆ.

ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾತ್ರೆಯನ್ನು ಪೂರ್ಣಗೊಳಿಸಲಾಗಿದ್ದು, ನಾಳೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಈ ನಡೆಸಲಾಗುತ್ತದೆ. ಬಳಿಕ ಎರಡು ದಿನ ಬಿಡುವಿನ ನಂತರ ಮತ್ತೆ ಯಾತ್ರೆಯನ್ನು ಪ್ರಾರಂಭಿಸಲಾಗುವುದು. ಅಷ್ಟರಲ್ಲಿ ಪಕ್ಷದ ಎರಡನೇ ಪಟ್ಟಿ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ತೀವ್ರ ಕುತೂಹಲ ಕೆರಳಿಸುವ ಹಾಸನ ವಿಧಾನ ಸಭಾ ಕ್ಷೇತ್ರ ಸೇರಿದಂತೆ 50ರಿಂದ 60 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಈ ಹಂತದಲ್ಲಿ ಪ್ರಕಟಿಸಲು ಉದ್ದೇಶಿಸಲಾಗಿದೆ.

ಕೆಲವೊಂದು ಗೊಂದಲಗಳಿಂದಾಗಿ ಮೊದಲ ಹಂತದ ಪಟ್ಟಿಯಲ್ಲಿ ಹಾಸನ ಜಿಲ್ಲೆಯ ಯಾವುದೇ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರಲಿಲ್ಲ. ಅದರಲ್ಲೂ ಹಾಸನ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ರ್ಪಧಿಸಲು ಮಾಜಿ ಶಾಸಕ ಎಚ್. ಪ್ರಕಾಶ್ ಅವರ ಪುತ್ರ ಎಚ್.ಪಿ. ಸ್ವರೂಪ್ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಪಕ್ಷದ ವರಿಷ್ಠರು ಈ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ. ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದ್ದ ಅಭ್ಯರ್ಥಿಗಳಿಗೆ ಚುನಾವಣೆ ಸಿದ್ಧತೆ ಕುರಿತಂತೆ ಕೆಲವು ಸಲಹೆ ಸೂಚನೆಗಳನ್ನು ನೀಡಲಾಗಿತ್ತು.

ಬಲೂನ್ ಹಾರಾಟದ ಬೆನ್ನಲ್ಲೇ ಅಮೇರಿಕಾ ಕಾರ್ಯದರ್ಶಿ ಚೀನಾ ಪ್ರವಾಸ ಮುಂದೂಡಿಕೆ

ಚುನಾವಣೆ ತಯಾರಿ ಕುರಿತಂತೆ ಅಭ್ಯರ್ಥಿಗಳು ಪಕ್ಷದ ವರಿಷ್ಠರು ನೀಡಿದ್ದ ಟಾಸ್ಕ್‍ನ್ನು ಎಷ್ಟರ ಮಟ್ಟಿಗೆ ಪೂರ್ಣಗೊಳಿಸಿದ್ದಾರೆ ಎಂಬ ಬಗ್ಗೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮೌಲ್ಯ ಮಾಪನ ಮಾಡಲಾಯಿತು.
ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಅಭ್ಯರ್ಥಿಗಳ ಚುನಾವಣೆ ಸಿದ್ದತೆಗಳನ್ನು ಮೌಲ್ಯ ಮಾಪನ ಮಾಡಿದ್ದು, ಚುನಾವಣಾ ತಂತ್ರಗಾರಿಕೆ ಕುರಿತಂತೆ ಮಾರ್ಗದರ್ಶನವನ್ನು ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

JDS, candidates, 2nd list, announced, before, session,

Articles You Might Like

Share This Article