ಸಂಕ್ರಾಂತಿ ನಂತರ ಜೆಡಿಎಸ್ 2ನೇ ಪಟ್ಟಿ ಬಿಡುಗಡೆ

Social Share

ಬೆಂಗಳೂರು, ಜ.8- ಪಂಚರತ್ನ ರಥಯಾತ್ರೆ ಮೂಲಕ ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಜೆಡಿಎಸ್ ಪಕ್ಷವು ಮಕರ ಸಂಕ್ರಾಂತಿ ಹಬ್ಬದ ನಂತರ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಿದೆ.

ಮೊದಲ ಹಂತದಲ್ಲಿ 193 ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತವರು ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿಲ್ಲ.

ಎರಡನೇ ಹಂತದ ಪಟ್ಟಿಯಲ್ಲಿ ಸುಮಾರು 60 ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಲಾಗುತ್ತದೆ.
ಕೆಲವೊಂದು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಅಭ್ಯರ್ಥಿಗಳ ಅಂತಿಮಗೊಳಿಸುವುದು ವಿಳಂಬವಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಪಂಚರತ್ನ ರಥಯಾತ್ರೆ ಪೂರ್ಣಗೊಂಡ ಬಳಿಕ ವರಿಷ್ಠ ಸಮಾಲೋಚಿಸಿ ಎರಡನೇ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಎರಡನೇ ಹಂತದ ಪಂಚರತ್ನ ರಥಯಾತ್ರೆ ನಡೆಯುತ್ತಿದೆ. ಜ.12ರಂದು ಕಲ್ಬುರ್ಗಿ ಯಾತ್ರೆ ಪೂರ್ಣಗೊಳ್ಳಲ್ಲಿದೆ. ಮತ್ತೆ ಯಾತ್ರೆ ಪ್ರಾರಂಭಿಸುವ ಮುನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲು ಉದ್ದೇಶಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಮ್ಯಾಕ್ಸ್ ವೆಲ್, ಕೊಹ್ಲಿ, ಯುವರಾಜ್ ಸಿಂಗ್ ದಾಖಲೆ ಮುರಿದ ಸೂರ್ಯಕುಮಾರ್

ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ಅವರು ಮುಂದಿನ ರಾಜಕೀಯ ನಡೆಯ ಬಗ್ಗೆ ಇನ್ನೂ ಸ್ಪಷ್ಟ ತೀರ್ಮಾನ ಪ್ರಕಟಿಸಿಲ್ಲ. ಈ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಗೊಂದಲವಿದೆ.

ಈ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರೆ, ಹಾಲಿ ಶಾಸಕರನ್ನು ಕಡೆಗಣಿಸಿದ್ದಾರೆ ಎಂಬ ಆರೋಪ ಕೇಳಿಬರಲಿದೆ. ಒಂದು ವೇಳೆ ಶಾಸಕರಿಗೆ ಟಿಕೆಟ್ ನೀಡಿದರೆ, ಕೊನೆ ಗಳಿಗೆಯಲ್ಲಿ ಪಕ್ಷ ತೊರೆದರೆ ಮುಜುಗರ ಎದುರಿಸಬೇಕಾಗುತ್ತದೆ ಎಂಬ ಸಂದಿಗ್ಧದ ಪರಿಸ್ಥಿತಿಯಲ್ಲಿ ಜೆಡಿಎಸ್ ವರಿಷ್ಠರಿದ್ದಾರೆ.

ಹಾಸನ ಕ್ಷೇತ್ರದಲ್ಲಿ ಮಾಜಿ ಶಾಸಕ ಎಚ್.ಎಸ್. ಪ್ರಕಾಶ್ ಅವರ ಪುತ್ರ ಎಚ್.ಪಿ.ಸ್ವರೂಪ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ಕ್ಷೇತ್ರದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಕೂಡ ಆಕಾಂಕ್ಷಿಯಾಗಿದ್ದಾರೆ.

ಉಳಿದ ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ. ಆದರೆ, ಈ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳದ ಹಿನ್ನೆಲೆಯಲ್ಲಿ ಮೊದಲ ಪಟ್ಟಿಯಲ್ಲಿ ಹಾಸನ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿಲ್ಲ.

ಹಾಸನ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ನಡೆಯುವ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ತೀರ್ಮಾನಿಸಲಾಗಿದೆ. ಅಷ್ಟರಲ್ಲಿ ಅಭ್ಯರ್ಥಿಗಳ ಆಯ್ಕೆ ಗೊಂದಲ ಬಗೆಹರಿಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲವು ಸಾಧಿಸಬೇಕು ಎಂಬ ಗುರಿಯೊಂದಿಗೆ ಪಂಚ ಯೋಜನೆಗಳನ್ನು ಜನರ ಮುಂದಿಟ್ಟು ಪ್ರಚಾರ ಆರಂಭಿಸಲಾಗಿದೆ.

ಜೋಡೊ ಯಾತ್ರೆ ಬೆಂಬಲಿಸಲು ಚಳಿಯಲ್ಲೂ ಶರ್ಟ್ ತೆಗೆದು ನೃತ್ಯ

ಸ್ವಂತ ಶಕ್ತಿಯ ಮೇಲೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲು ನಾಡಿನ ಜನರು ಆಶೀರ್ವಾದ ಮಾಡಿದರೆ, ಐದು ವರ್ಷಗಳಲ್ಲಿ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಭರವಸೆಯೊಂದಿಗೆ ಯಾತ್ರೆ ನಡೆಸಲಾಗುತ್ತಿದೆ.

JDS, candidates, assembly election,

Articles You Might Like

Share This Article