ಬೆಂಗಳೂರು,ಸೆ.26- ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ರಚನೆ ಮಾಡಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ದಸರಾ ಉತ್ಸವ ಮುಗಿದ ನಂತರ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಸಬೇಕೆಂಬ ಗುರಿ ಇಟ್ಟುಕೊಂಡಿದೆ. ಈ ಗುರಿ ತಲುಪಲು ಪಂಚರತ್ನ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು ಚುನಾವಣಾ ಪ್ರಚಾರ ಕೈಗೊಳ್ಳಲಿದೆ.
ಈಗಾಗಲೇ ನೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಹಾಲಿ ಶಾಸಕರಲ್ಲಿ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಮಣೆ ಹಾಕುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್, ಯದುವೀರ್ ಸಿಂಹಾಸನಾರೋಹಣ
ಅಕ್ಟೋಬರ್ 6ರಿಂದ ಪಂಚರತ್ನ ಕಾರ್ಯಕ್ರಮವನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ , ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮತ್ತಿತರ ನಾಯಕರು ವಹಿಸಲಿದ್ದಾರೆ.
ಸುಮಾರು 150 ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ಸಾಗಲಿದೆ. ಆಯಾ ಕ್ಷೇತ್ರಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಸಿರುವ ಅಭ್ಯರ್ಥಿಗಳಿಗೆ ಈ ಕಾರ್ಯಕ್ರಮದ ಹೊಣೆಗಾರಿಕೆ ನೀಡಲಾಗುತ್ತದೆ.
ಹಳೇಮೈಸೂರು, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಂಚರತ್ನ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ವಸತಿ, ನೀರಾವರಿ, ರೈತರ ಬದುಕು ಹಸನುಗೊಳಿಸುವ ಭರವಸೆಯನ್ನು ಪಂಚರತ್ನ ಕಾರ್ಯಕ್ರಮದ ಮೂಲಕ ನೀಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ಗೆ ಸ್ವಂತ ಶಕ್ತಿಯ ಮೇಲೆ ಅಧಿಕಾರ ಹಿಡಿಯುವ ಅವಕಾಶ ಕಲ್ಪಿಸಬೇಕೆಂದು ಕೋರಲು ತೀರ್ಮಾನಿಸಲಾಗಿದೆ.