ಪಂಚರತ್ನ ರಥಯಾತ್ರೆ ಸಂದರ್ಭದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್..?

Social Share

ಬೆಂಗಳೂರು,ಅ.25- ಮುಂಬರುವ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪಂಚರತ್ನ ರಥಯಾತ್ರೆ ಸಂದರ್ಭದಲ್ಲೇ ಪ್ರಕಟವಾಗುವ ಸಾಧ್ಯತೆಗಳಿವೆ. ನವೆಂಬರ್ 1ರಂದು ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮಲೆಯಿಂದ ಪಂಚರತ್ನ ರಥಯಾತ್ರೆ ಆರಂಭವಾಗಲಿದೆ.

ಈ ರಥಯಾತ್ರೆ ಸಂದರ್ಭದಲ್ಲೇ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ಸಿದ್ದತೆ ನಡೆಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಈಗಾಗಲೇ 126 ಸಂಭವನೀಯ ಅಭ್ಯರ್ಥಿಗಳಿಗೆ ಚುನಾವಣೆ ಸಿದ್ದತೆ ಕುರಿತಂತೆ ಮೈಸೂರಿನಲ್ಲಿ ಕಾರ್ಯಗಾರ ನಡೆಸಿ ಪಕ್ಷದ ವರಿಷ್ಠರು ಮಾರ್ಗದರ್ಶನ ಮಾಡಿದ್ದಾರೆ.

ಬಿಡದಿ ಕಾರ್ಯಾಗಾರದಲ್ಲಿ ನೀಡಲಾಗಿದ್ದ ಟಾಸ್ಕ್‍ನ್ನು ಕೆಲವರು ಪೂರ್ಣಗೊಳಿಸಿರಲಿಲ್ಲ. ಅವರಿಂದ ವಿವರಣೆ ಕೇಳಲಾಗಿದೆ. ಎಲ್ಲ ರೀತಿಯಲ್ಲೂ ಸಮರ್ಥರಾದವರಿಗೆ ಮಾತ್ರ ಕಣಕ್ಕಿಳಿಸಲು ಉದ್ದೇಶಿಸಲಾಗಿದೆ.

ನೆಪಮಾತ್ರಕ್ಕೆ ಸ್ರ್ಪಸುವಂತವರಿಗೆ ಪಕ್ಷದ ಬಿ ಫಾರಂ ನೀಡುವುದು ಬೇಡ ಎಂಬ ತೀರ್ಮಾನಕ್ಕೆ ಪಕ್ಷದ ವರಿಷ್ಠರು ಬಂದಿದ್ದಾರೆ. ರಾಜ್ಯದಲ್ಲಿ ಪಂಚರತ್ನ ರಥ ಯಾತ್ರೆಯನ್ನು ಜನತಾ ಜಲಧಾರೆ ರೀತಿಯಲ್ಲೇ ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಿನ್ನೆಯಿಂದ ವಿಡಿಯೋ ಕಾನರೆನ್ಸ್ ಮೂಲಕ ಶಾಸಕರು ಹಾಗೂ ಸಂಭವನೀಯ ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಹರ್ಷ ಕುಟುಂಬದವರಿಗೆ ಕೊಲೆ ಬೆದರಿಕೆ, ಶಿವಮೊಗ್ಗದಲ್ಲಿ ಮತ್ತೆ ಆತಂಕ

ಪಂಚರತ್ನ ರಥ ಯಾತ್ರೆಯ ಸಿದ್ದತೆ ಕುರಿತಂತೆ ಮಾರ್ಗದರ್ಶನ ಮಾಡಿದ್ದಾರೆ. ನ.1ರಂದು ಆರಂಭವಾಗುವ ರಥಯಾತ್ರೆ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಪಕ್ಷದ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಅದಕ್ಕೆ ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಮಾಡಲಾಗುತ್ತಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-10-2022)

ಈ ರಥ ಯಾತ್ರೆಯ ನಡುವೆ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕಾರ್ಯಾಗಾರ ನಡೆಸಿ ಚುನಾವಣೆಯ ತಂತ್ರ ಹಾಗೂ ಸಿದ್ದತೆ ಬಗ್ಗೆ ಪಕ್ಷದ ವರಿಷ್ಠರು ಸಲಹೆಸೂಚನೆ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ

Articles You Might Like

Share This Article