ಬೆಂಗಳೂರು,ಫೆ.2-ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆ ಕುರಿತಂತೆ ಜೆಡಿಎಸ್‍ನ ಘೋಷಿತ ಅಭ್ಯರ್ಥಿಗಳೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ಫೆ.4ರಂದು ಜೆ.ಪಿ.ಭವನದಲ್ಲಿ ಪಕ್ಷದ ಅಭ್ಯರ್ಥಿಗಳ ಸಭೆಯನ್ನು ಕರೆಯಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ಪ್ರಕಟಿಸಿರುವ 93 ಅಭ್ಯರ್ಥಿಗಳ ಚುನಾವಣೆ ಸಿದ್ಧತೆ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ.
ಪಂಚರತ್ನ ರಥಯಾತ್ರೆ ಸೇರಿದಂತೆ ಆಯಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆ ಬಗ್ಗೆ ಅಭ್ಯರ್ಥಿಗಳು ಇದುವರೆಗೆ ಕೈಗೊಂಡಿರುವ ಕ್ರಮಗಳ ಪರಾಮರ್ಶೆಯನ್ನು ಸಭೆಯಲ್ಲಿ ಮಾಡಲಾಗುತ್ತದೆ.
ವಿವಿಧ ಸಭೆ, ಕಾರ್ಯಗಾರಗಳ ಮೂಲಕ ಸಂಭವನೀಯ ಅಭ್ಯರ್ಥಿಗಳಿಗೆ ಚುನಾವಣೆ ಸಿದ್ಧತೆ ಬಗ್ಗೆ ಮಾರ್ಗದರ್ಶನ ಮಾಡಲಾಗಿತ್ತು.
ಪಾದಯಾತ್ರೆ, ಗ್ರಾಮ ವಾಸ್ತವ್ಯದ ಮೂಲಕ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿರುವ ಸಾಧನೆಗಳು ಹಾಗೂ ಮುಂದೆ ಅಧಿಕಾರಕ್ಕೆ ಬಂದರೆ ಮಾಡಲಿರುವ ಪಂಚರತ್ನ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಜನರ ವಿಶ್ವಾಸಗಳಿಸಲು ನಿರ್ದೇಶನ ನೀಡಲಾಗಿತ್ತು.
ಮದುವೆ ವೇಳೆ ಗಲಾಟೆ, ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ
ಕ್ಷೇತ್ರವಾರು ಅಭ್ಯರ್ಥಿಗಳ ಸಿದ್ಧತೆಯನ್ನು ಅವಲೋಕನ ಮಾಡಲಿದ್ದು, ಅಗತ್ಯಬಿದ್ದರೆ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ವರಿಷ್ಠರ ಸೂಚನೆಯಂತೆ ಚುನಾವಣಾ ತಯಾರಿ ನಡೆಸದ ಘೋಷಿತ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲು ಹಿಂದು-ಮುಂದು ನೋಡುವುದಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ಗುರಿಯನ್ನು ಜೆಡಿಎಸ್ ಹೊಂದಿದೆ. ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ಕೈಗೊಂಡು ಪಂಚ ಯೋಜನೆಗಳ ಬಗ್ಗೆ ಪ್ರಚಾರವನ್ನು ಕೈಗೊಳ್ಳಲಾಗಿದೆ.
ಶರಿಯತ್ ಕಾನೂನಿನಂತೆ ವಿಚ್ಛೇದನ ಪಡೆಯಲು ಸಾಧ್ಯವಿಲ್ಲ : ಮದ್ರಾಸ್ ಹೈಕೋರ್ಟ್
ಹಾಸನ ಸೇರಿದಂತೆ ಬಾಕಿ ಉಳಿದಿರುವ ಇತರೆ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು 8-10 ದಿನಗಳಲ್ಲಿ ಅಂತಿಮಗೊಳಿಸಲು ವರಿಷ್ಠರು ತೀರ್ಮಾನಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
JDS, candidates, meeting, February 4,