ಶಿವರಾತ್ರಿ ನಂತರ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ..?

Social Share

ಬೆಂಗಳೂರು, ಜ.25-ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಹಾಶಿವರಾತ್ರಿ ಹಬ್ಬದದೊಳಗೆ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಮೊದಲ ಹಂತದಲ್ಲಿ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಜೆಡಿಎಸ್ ಈಗ ಎರಡನೇ ಹಂತದಲ್ಲಿ ಸುಮಾರು 60 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇನ್ನೆರಡು ವಾರದಲ್ಲಿ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ತೀವ್ರ ಕುತೂಹಲ ಕೆರಳಿಸಿರುವ ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಹಾಸನ, ಅರಕಲಗೂಡು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಗೊಂದಲವಿದ್ದ ಹಿನ್ನೆಲೆಯಲ್ಲಿ ಮೊದಲ ಪಟ್ಟಿಯಲ್ಲಿ ಹಾಸನ ಜಿಲ್ಲೆಯ ಅಭ್ಯರ್ಥಿಗಳ ಹೆಸರು ಪ್ರಕಟಿಸಿರಲಿಲ್ಲ.

ಬಿಜೆಪಿಯಲ್ಲಿ ರಾಜಾಹುಲಿ ಬಿಎಸ್‍ವೈಗೆ ಇದೀಗ ಭಾರೀ ಬೇಡಿಕೆ

ಈಗಾಗಲೇ 93 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಅವರು ಈಗಾಗಲೇ ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದಾರೆ. ಮೊದಲ ಪಟ್ಟಿಯಲ್ಲಿ ಸಿಂದಗಿ ಕ್ಷೇತ್ರದ ಘೋಸಿತ ಅಭ್ಯರ್ಥಿ ಶಿವಾನಂದ ಪಾಟೀಲ್ ಮೃತರಾಗಿದ್ದು, ಪರ್ಯಾಯ ಅಭ್ಯರ್ಥಿ ಆಯ್ಕೆ ಮಾಡಬೇಕಿದೆ. ಇದರ ಜೊತೆಗೆ ಎರಡನೇ ಹಂತದಲ್ಲಿ 60 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.

ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರತರಾಗಿರುವ ಹಿನ್ನಲೆಯಲ್ಲಿ ಈ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಮಕರ ಸಂಕ್ರಾಂತಿ ಹಬ್ಬದ ವೇಳೆಗೆ ಪಟ್ಟಿ ಬಿಡುಗಡೆ ಮಾಡಲು ಉದ್ದೇಶಿಸಲಾಗಿತ್ತು.

ಹಾಸನ ಜೆಡಿಎಸ್ ಟಿಕೆಟ್‌ಗೆ ಜಿದ್ಧಾಜಿದ್ದಿ

ಹಾಸನ ಕ್ಷೇತ್ರದಲ್ಲಿ ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್ ಅವರ ಪುತ್ರ ಸ್ವರೂಪ್ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸೇರಿದಂತೆ ಹಲವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಶಾಸಕ ಶಿವಲಿಂಗೇಗೌಡ ಜೆಡಿಎಸ್ ತೊರೆಯುವ ಹಾದಿಯಲ್ಲಿರುವುದರಿಂದ ಅರಸೀಕೆರೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಳಂಬ ಮಾಡಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಪಂಚರತ್ನ ರಥಯಾತ್ರೆ ಮೂಲಕ ಕುಮಾರಸ್ವಾಮಿ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, 123 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬ ಗುರಿ ಹಾಕಿಕೊಂಡಿದೆ. ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದರೆ ಐದು ವರ್ಷದಲ್ಲಿ ಪಂಚರತ್ನ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಲಾಗುತ್ತಿದೆ.

JDS, candidates, second, list, assembly elections,

Articles You Might Like

Share This Article