ಬೆಂಗಳೂರು, ಡಿ.2- ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಅವಕಾಶ ಒದಗಿ ಬಂದರೆ ದಲಿತರನ್ನು ಮುಖ್ಯಮಂತ್ರಿ ಮಾಡಲು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈಗಾಗಲೇ ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದರೆ ಮುಸ್ಲೀಂರನ್ನು ಮತ್ತು ಮಹಿಳೆಯರನ್ನು
ಉಪ ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದ್ದರು. ಪಂಚರತ್ನ ರಥಯಾತ್ರೆಯ ಪ್ರವಾಸದಲ್ಲಿರುವ ಕುಮಾರಸ್ವಾಮಿ ಈಗ ದಲಿತರನ್ನು ಮುಖ್ಯಮಂತ್ರಿ ಮಾಡಲು ತಯಾರಿರುವುದಾಗಿ ತುಮಕೂರಿನಲ್ಲಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಅವರು, ದಲಿತರು ಮುಖ್ಯಮಂತ್ರಿ ಏಕಾಗಬಾರದು ಎಂದು ಪ್ರಶ್ನಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗಳಿಸಿದರೆ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎಂದಿದ್ದಾರೆ.
ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದಲಿತ ಮಹಿಳೆಗೆ ಉದ್ಯೋಗ ನೀಡಿ ಮನೆಯಲ್ಲಿರಲು ಅವಕಾಶ ಮಾಡಿಕೊಡಲಾಗಿತ್ತು. ಈ ರೀತಿ ಯಾವ ಮುಖ್ಯಮಂತ್ರಿ ಅವಕಾಶ ಕಲ್ಪಿಸಿದ್ದರು ಎಂದು ಪ್ರಶ್ನಿಸಿದ್ದಾರೆ.
ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಅರೆಸ್ಟ್
ಕೋಲಾರದಲ್ಲಿ ಪಂಚರತ್ನ ರಥಯಾತ್ರೆಯ ಸಂಧರ್ಭದಲ್ಲಿ ನಾಡಿನ ಜನರು ಸ್ವಂತ ಶಕ್ತಿಯ ಮೇಲೆ ಐದು ವರ್ಷ ಆಡಳಿತ ನಡೆಸಲು ಅವಕಾಶ ಕೊಟ್ಟರೆ, ದಲಿತರನ್ನು ಉಪ ಮುಖ್ಯಮಂತ್ರಿ ಮಾಡುವುದಾಗಿ ಹೇಳಿದ್ದರು. ಈಗ ಮುಖ್ಯಮಂತ್ರಿ ಸ್ಥಾನವನ್ನು ನೀಡಲು ಸಿದ್ಧ ಎಂದು ತಿಳಿಸಿದ್ದಾರೆ.
ಅವಕಾಶ ಸಿಕ್ಕರೆ ಮುಸ್ಲೀಂರು ಏಕೆ ಮುಖ್ಯಮಂತ್ರಿಯಾಗಬಾರದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕುಮಾರಸ್ವಾಮಿ ಪ್ರಶ್ನಿಸಿದ್ದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಸ್ವಂತ ಬಲದ ಮೇಲೆ ಸರ್ಕಾರ ರಚಿಸಬೇಕು ಎಂಬ ಗುರಿ ಹೊಂದಿರುವ ಕುಮಾರಸ್ವಾಮಿ , ಜೆಡಿಎಸ್ ಗೆಲವಿಗೆ ಹರಸಾಹಸ ಪಡುತ್ತಿದ್ದಾರೆ. ಮತ್ತೆ ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ.
ಘೋಷಣೆ ಮಾಡಿರುವ ಅಭ್ಯರ್ಥಿಗಳ ಬದಲಾವಣೆ ಇಲ್ಲ : ಹೆಚ್‌ಡಿಕೆ
ಅದಕ್ಕಾಗಿ ಕಳೆದ ವರ್ಷ ಜನತಾ ಜಲಧಾರೆ ಕಾರ್ಯಕ್ರಮ ಕೈಗೊಂಡಿದ್ದರು. ನಂತರ ಬೆಂಗಳೂರಿನಲ್ಲಿ ಜನತಾ ಮಿತ್ರ ಕಾರ್ಯಕ್ರಮ ಮಾಡಿದ್ದು, ಈಗ ಪಂಚರತ್ನ ರಥಯಾತ್ರೆ ಕೈಗೊಂಡಿದ್ದಾರೆ. ಅಲ್ಲದೆ, ಪಕ್ಷದ ಸಂಭವನೀಯ ಅಭ್ಯರ್ಥಿಗಳಿಗೆ ಎರಡೂ ಮೂರು ಕಾರ್ಯಾಗಾರ ನಡೆಸಿ ಚುನಾವಣೆಗೆ ತರಬೇತುಗೊಳಿಸಿದ್ದಾರೆ.
ನಾಡಿ ಹತ್ತು ಹಲವು ಸಮಸ್ಯೆಗಳಿಗೆ ಪಂಚರತ್ನ ಯೋಜನೆಗಳು ಪರಿಹಾರವಾಗಲಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಕೋರುತ್ತಿದ್ದಾರೆ.
JDS, comes, power, Dalit, CM,