Tuesday, April 30, 2024
Homeರಾಜಕೀಯಅ.11ರಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ 3 ದಿನ ಜೆಡಿಎಸ್‍ನ ಕೋರ್ ಕಮಿಟಿ ಪ್ರವಾಸ

ಅ.11ರಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ 3 ದಿನ ಜೆಡಿಎಸ್‍ನ ಕೋರ್ ಕಮಿಟಿ ಪ್ರವಾಸ

ಬೆಂಗಳೂರು, ಅ.5-ಜೆಡಿಎಸ್‍ನ ಕೋರ್ ಕಮಿಟಿ ಆರಂಭಿಸಿರುವ ಪಕ್ಷದ ಪುನಶ್ಚೇತನ ಪರ್ವದ ಎರಡನೇ ಕಾರ್ಯಕ್ರಮವು ಕಿತ್ತೂರು ಕರ್ನಾಟಕ ಭಾಗದಲ್ಲಿ ಅ.11ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದ ಕೋರ್ ಕಮಿಟಿಯು ಪಕ್ಷದ ಪುನರ್ ಸಂಘಟನೆಗಾಗಿ ರಾಜ್ಯ ಪ್ರವಾಸವನ್ನು ಆರಂಭಿಸಿದ್ದು, ವಿಭಾಗವಾರು ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗೊಂಡಿತ್ತು. ಎರಡನೇ ಹಂತದಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಪ್ರವಾಸ ಹಮ್ಮಿಕೊಂಡಿದೆ.

ಅ.11ರಿಂದ 13ರವರೆಗೆ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡು ಆಯಾ ಜಿಲ್ಲೆಯ ಜಿಲ್ಲಾಧ್ಯಕ್ಷರು, ಸ್ಥಳೀಯ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಪಕ್ಷದ ಪದಾಕಾರಿಗಳು, ವಿಧಾನಸಭಾ ಚುನಾವಣೆಯಲ್ಲಿ ಸ್ರ್ಪಧಿಸಿದ್ದ ಅಭ್ಯರ್ಥಿಗಳು, ಪಕ್ಷದ ಮುಖಂಡರ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಪಕ್ಷದ ಪುನರ್ ಸಂಘಟನೆಗೆ ಸಂಬಂಧಿಸಿದಂತೆ ಕೋರ್ ಕಮಿಟಿಯು ಅಭಿಪ್ರಾಯ ಸಂಗ್ರಹ ಮಾಡಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಜಾತಿಗಣತಿ ಚರ್ಚೆ : ಅ.9ಕ್ಕೆ ದೆಹಲಿಯಲ್ಲಿ ಕಾಂಗ್ರೆಸ್ ಮಹತ್ವದ ಸಭೆ

ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಸಂಬಂಸಿದ ಸಭೆಯನ್ನು ಅ.11ರಂದು ವಿಜಯಪುರದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಸಂಬಂಸಿದ ಸಭೆಯನ್ನು ಅ.12ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಲಿದ್ದು, ಬೆಳಗಾವಿ ವಿಭಾಗದ ಸಭೆಯನ್ನು ಬೆಳಗಾವಿಯಲ್ಲಿ ನಡೆಸಲಾಗುತ್ತದೆ.

ಸೆ.26 ಮತ್ತು 27 ರಂದು ಕಲ್ಯಾಣ ಕರ್ನಟಕ ಭಾಗದದಲ್ಲಿ ಸಭೆಗಳನ್ನು ನಡೆಸಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಸಲಹೆ, ಸೂಚನೆ ಆಲಿಸಲಾಗಿದೆ. ಹೀಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುವ ಕೋರ್ ಕಮಿಟಿಯು ಪಕ್ಷದ ಪುನಶ್ಚೇತನ ಹಾಗೂ ಪದಾಕಾರಿಗಳ ಬದಲಾವಣೆಗೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಅಧ್ಯಕ್ಷರಿಗೆ ವರದಿ ಸಲ್ಲಿಸಲಿದೆ. ಆ ನಂತರ ಪಕ್ಷದ ಎಲ್ಲಾ ಹಂತದ ಪದಾಧಿಕಾರಿಗಳ ಬದಲಾವಣೆ ಮಾಡಲು ವರಿಷ್ಠರು ಉದ್ದೇಶಿಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

RELATED ARTICLES

Latest News