ಮುಂದಿನ ವಾರ ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಆಯ್ಕೆ

Spread the love

ಬೆಂಗಳೂರು, ಮಾ.16- ಮುಂದಿನ ವಾರ ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಪಟ್ಟಿಯನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದು ಕೋರ್ ಕಮಿಟಿ ಸದಸ್ಯರ ಪಟ್ಟಿಯನ್ನು ಅಂತಿಮಗೊಳಿಸಲು ವರಿಷ್ಠರು ತೀರ್ಮಾನಿಸಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೋರ್ ಕಮಿಟಿ ಸದಸ್ಯರನ್ನು ತುರ್ತಾಗಿ ಆಯ್ಕೆ ಮಾಡಿ ಪಕ್ಷ ಸಂಘಟನೆಯನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಸಮಾಲೋಚನೆ ನಡೆಸಿದ್ದು, ಮುಂದಿನ ವಾರ ಶಾಸಕಾಂಗ ಪಕ್ಷದ ಸಭೆ ಕರೆದು ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವುದು, ಜಿಲ್ಲಾ, ತಾಲ್ಲೂಕು ಹಾಗೂ ರಾಜ್ಯಮಟ್ಟದ ಪದಾಕಾರಿಗಳ ಪುನಾರಚನೆ, ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಸಿದ್ಧತೆ, ವಿಧಾನಸಭೆಯ ಮೂರು ಉಪಚುನಾವಣೆಗಳಿಗೆ ಸಂಬಂಸಿದಂತೆ ಅಭ್ಯರ್ಥಿಗಳ ಆಯ್ಕೆ, ಪ್ರಚಲಿತ ರಾಜಕೀಯ ವಿದ್ಯಮಾನ, ಮೊದಲಾದ ವಿಚಾರಗಳ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Facebook Comments