ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದ ಜೆಡಿಎಸ್, ಚುನಾವಣಾ ಪ್ರಚಾರ ಆರಂಭ

Social Share

ಬೆಂಗಳೂರುನ.18- ಪ್ರತಿಪಕ್ಷ ಕಾಂಗ್ರೆಸ್‍ನ ಭಾರತ ಐಕ್ಯತಾಯಾತ್ರೆ, ಆಡಳಿತಾರೂಢ ಬಿಜೆಪಿಯ ಜನಸಂಕಲ್ಪ ಯಾತ್ರೆಯ ಬೆನ್ನಲ್ಲೆ ಜೆಡಿಎಸ್ ಪಂಚರತ್ನ ರಥಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರ ಪ್ರಾರಂಭಿಸಿದೆ.

ರಾಜ್ಯದ ಗಡಿ ಜಿಲ್ಲೆ ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮಲೆ ಶ್ರೀ ಗಣಪತಿ ದೇವಾಲಯದಿಂದ ನ.1ರಂದೇ ರಥಯಾತ್ರೆ ಆರಂಭವಾಗಿತ್ತು. ಆದರೆ ಮಳೆಯ ಕಾರಣದಿಂದ ಮುಂದೂಡಲಾಗಿತ್ತು. ಬಳಿಕ ನ.14ರಂದು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆಗಲೂ ಮಳೆ ಅಡ್ಡಿಯಾಗಿ ಯಾತ್ರೆ ಮುಂದೂಡಲಾಗಿತ್ತು.
ಮಳೆಯಿಂದಾಗಿ ಎರಡು ಬಾರಿ ಮುಂದೂಡಲ್ಪಟ್ಟಿದ್ದ ಈ ಪಂಚರತ್ನ ರಥಯಾತ್ರೆಯು ಇದೀಗ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆಯಿಂದ ಆರಂಭವಾಗಿದೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಗುರಿ ಹೊಂದಿರುವ ಜೆಡಿಎಸ್, ಸ್ವಂತ ಬಲದಿಂದ ಸರ್ಕಾರ ರಚಿಸಬೇಕೆಂಬ ಉದ್ದೇಶ ಹೊಂದಿದೆ. ಇದಕ್ಕಾಗಿ ಪಂಚರತ್ನ ಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದೆ.

ಪಕ್ಷದ ಶಾಸಕರು,ನಾಯಕರು ಹಾಗೂ ಮುಖಂಡರ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಜೆಡಿಎಸ್ ಪಂಚರತ್ನ ರಥಗಳಿಗೆ ಪೂಜೆ ಸಲ್ಲಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು ಚಾಲನೆ ನೀಡಿದ್ದಾರೆ.

ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಹೆಚ್.ಡಿ.ಕುಮಾರಸ್ವಾಮಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಿದ್ದರು. ನಂತರ ಅವರು ಮುಳಬಾಗಿಲು ಆಗಮಿಸಿ ಪಂಚರತ್ನ ಯಾತ್ರೆಗೆ ಚಾಲನೆ ಕೊಡುವ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇಂದು ಮಧ್ಯಾಹ್ನ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದ ಜಾಗದಲ್ಲಿ ಬೃಹತ್ ಸಮಾವೇಶ ನಡೆಸಲಾಯಿತು. ಈ ಸಮಾವೇಶದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮಾಜಿ ಸಚಿವರು, ವಿವಿಧ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳು ಭಾಗವಹಿಸಿದ್ದರು.

ಮತದಾರರ ಪಟ್ಟಿಯಿಂದ ಸಾವಿರಾರು ಮಂದಿಯ ಹೆಸರು ನಾಪತ್ತೆ : ಚಿಲುಮೆ ಕೈವಾಡ ಶಂಕೆ

ನವ ಕರ್ನಾಟಕ ನಿರ್ಮಾಣಕ್ಕಾಗಿ ಮಹಾಯಾತ್ರೆ ಹೆಸರಿನಲ್ಲಿ ಈ ರಥಯಾತ್ರೆ ಕೈಗೊಳ್ಳಲಾಗುತ್ತಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪಂಚರತ್ನ ಪರಿಪೂರ್ಣ ಪರಿಹಾರ ಎಂದು ಬಿಂಬಿಸಲಾಗುತ್ತಿದೆ. ಶಿಕ್ಷಣವೆ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು. ಕೃಷಿ ಚೈತನ್ಯ, ಯುವ ನವಮಾರ್ಗ ಮತ್ತು ಮಹಿಳಾ ಸಬಲೀಕರಣ ಹಾಗೂ ವಸತಿ ಆಸರೆ ಪಂಚರತ್ನ ಯೋಜನೆಗಳಾಗಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಕೂಡ ಈ ಐದು ಅಂಶಗಳೇ ಪ್ರಮುಖ ಯೋಜನೆಗಳಾಗಿರುತ್ತವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ರಾತ್ರಿ ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡುವರು. ಈ ವೇಳೆ ಅವರು ಗ್ರಾಮದ ಜನರ ಜತೆ ಸಂವಾದ, ವಿಚಾರ ವಿನಿಮಯ ನಡೆಸುವರು. ಮುಖ್ಯವಾಗಿ ಮಹಿಳೆಯರು, ಯುವಕರು, ರೈತರು, ವೃದ್ಧರ ಜತೆ ಚರ್ಚೆ ನಡೆಸುವರು. ಹಳ್ಳಿಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯುವುದರ ಜತೆಗೆ, ಸ್ವತಃ ತಾವೇ ಗ್ರಾಮ ಸಂಚಾರ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮುಳಬಾಗಿಲು ಕ್ಷೇತ್ರ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರು ಕೂಡ ಜತೆಯಲ್ಲಿ ಇರುತ್ತಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ

ಮುಳಬಾಗಿಲು ಕ್ಷೇತ್ರದಲ್ಲಿ ಆರಂಭವಾಗುವ ರಥಯಾತ್ರೆಯು, ದಿನಕ್ಕೊಂದು ಕ್ಷೇತ್ರದಲ್ಲಿ ಪ್ರವಾಸ ಮಾಡಲಿದೆ. ಅ.27ರಂದು ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಂಚರತ್ನ ರಥಕ್ಕೆ ಸಾಂಕೇತಿಕವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದರು.

JDS, election, campaign, begin, kolar, hd kumaraswamy,

Articles You Might Like

Share This Article