ಜ್ಯೋತಿಷ್ಯಕ್ಕೆ ಜೋತು ಬಿದ್ದ ಜೆಡಿಎಸ್, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ

Social Share

ಬೆಂಗಳೂರು,ನ.18-ಜ್ಯೋತಿಷ್ಯಕ್ಕೆ ಜೋತು ಬಿದ್ದಿರುವ ಜೆಡಿಎಸ್ ಇಂದು ಬಿಡುಗಡೆಯಾಗಬೇಕಿದ್ದ 2023ರ ರಾಜ್ಯ ವಿಧಾನಸಭೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯನ್ನು ಮುಂದೂಡ ಲಾಗಿದೆ.

ಪಂಚರತ್ನ ರಥಯಾತ್ರೆ ಸಂಬಂಧ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಮಾವೇಶದಲ್ಲಿ 90 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಸಂಭವನೀಯ ಅಭ್ಯರ್ಥಿಗಳಿಂದ ಪಕ್ಷಾಂತರ ಮಾಡುವುದಿಲ್ಲ ಎಂಬ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮವಿತ್ತು.

ಆದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರ ಸಲಹೆಯಂತೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂದೂಡಲಾಗಿದೆ. ಪಂಚರತ್ನ ರಥಯಾತ್ರೆ ನಡುವೆ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಪಟ್ಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

ಮತದಾರರ ಪಟ್ಟಿಯಿಂದ ಸಾವಿರಾರು ಮಂದಿಯ ಹೆಸರು ನಾಪತ್ತೆ : ಚಿಲುಮೆ ಕೈವಾಡ ಶಂಕೆ

ಪಕ್ಷದ ಹಾಲಿ ಶಾಸಕರ ಪೈಕಿ ಪಕ್ಷದಿಂದ ಉಚ್ಛಾಟನೆಯಾಗಿರುವ ಕೋಲಾರದ ಕೆ.ಶ್ರೀನಿವಾಸಗೌಡ, ಗುಬ್ಬಿಯ ಎಸ್.ಆರ್. ಶ್ರೀನಿವಾಸ್(ವಾಸು) ಅವರಲ್ಲದೆ, ಮಂಡ್ಯದ ಶಾಸಕ ಎಂ. ಶ್ರೀನಿವಾಸ್ ಅವರಿಗೆ ಈ ಬಾರಿ ಟಿಕೆಟ್ ನೀಡುವುದಿಲ್ಲ. ಉಳಿದೆಲ್ಲ ಶಾಸಕರಿಗೂ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮೈಸೂರಿನಲ್ಲಿ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮಾಡುವುದು ಬೇಡ ಎಂದಿದ್ದಾರೆ. ಅವರು ನಮ್ಮ ಪಕ್ಷದ ಜ್ಯೋತಿಷಿಗಳಾಗಿದ್ದಾರೆ. ಇಂದು ಸಮಯ ಪ್ರಶಸ್ತವಾಗಿಲ್ಲವೆಂದು ತಕರಾರು ತೆಗೆದಿದ್ದಾರೆ ಎಂದು ತಿಳಿಸಿದ್ದಾರೆ.

ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ

ವಿಧಾನಸಭೆ ಚುನಾವಣೆಯ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಸಮಯದಲ್ಲಿ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಹೆಚ್.ಡಿ ದೇವೇಗೌಡರು ಪಟ್ಟಿ ಬಿಡುಗಡೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ಮೈಸೂರಿನ ಬಸ್ ನಿಲ್ದಾಣದ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿರುವ ಅವರು, ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನಾನು ನೋಡಿದ್ದೇನೆ. ಸಂಸದರು ಕಣ್ಣೀರು ಹಾಕಿಸಿರುವುದನ್ನು ಗಮನಿಸಿದ್ದೇನೆ. ಇವರಿಗೆ ಮತ ನೀಡಿದ ಜನರ ಕತೆ ಏನು ಎಂದು ಪ್ರಶ್ನಿಸಿದ್ದಾರೆ.

ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ

ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡಹುವ ಕೆಲಸ ಮಾಡಬೇಡಿ ಎಂದು ಎಚ್.ಡಿ.ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.

JDS, first, candidates, list, release, postponed,

Articles You Might Like

Share This Article