ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ, ಯಾವುದೇ ಸಂದರ್ಭದಲ್ಲಿ ಪ್ರಕಟ ಸಾಧ್ಯತೆ

Social Share

ಬೆಂಗಳೂರು, ಡಿ.18-ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲಿ ಪ್ರಕಟವಾಗುವ ಸಾಧ್ಯತೆಗಳಿವೆ. ಪಂಚರತ್ನ ರಥಯಾತ್ರೆ ನಡೆಸಿದ ಮತ್ತು ನಡೆಸುತ್ತಿರುವ ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಅಭ್ಯರ್ಥಿಗಳನ್ನು ಪ್ರಕಟಿಸಲಾಗುತ್ತಿದೆ.

ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವಂತೆ ಆಕಾಂಕ್ಷಿಗಳಿಂದ ಒತ್ತಡವು ಹೆಚ್ಚಾಗಿದೆ. ಹೀಗಾಗಿ ಯಾವುದೇ ಸಂದರ್ಭದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
2023ರ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾ„ಸಬೇಕು ಎಂಬ ಗುರಿ ಹೊಂದಿರುವ ಜೆಡಿಎಸ್‍ನ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು, ಪ್ರಕಟಣೆ ಮಾತ್ರ ಬಾಕಿ ಉಳಿದಿದೆ.

96ರಿಂದ 116 ಅಭ್ಯರ್ಥಿಗಳ ಪಟ್ಟಿಯನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಾರ್ಗದರ್ಶನದಂತೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ.ಅಭ್ಯರ್ಥಿಗಳು ಆಯ್ಕೆಯಾಗಿರುವ ಕ್ಷೇತ್ರಗಳಲ್ಲಿ ಚುನಾವಣೆ ತಯಾರಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಟಿಕೆಟ್ ಖಾತ್ರಿಯಾಗಿರುವ ಸಂಭನೀಯ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜನವರಿಯಲ್ಲಿ ಎರಡನೇ ಹಂತದ ಪಂಚರತ್ನ ರಥಯಾತ್ರೆ ಪ್ರಾರಂಭವಾಗಲಿದ್ದು, ಅಷ್ಟರಲ್ಲಿ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಒಂದು ವರ್ಷದಿಂದಲೂ ಒಂದಲ ಒಂದು ನೆಪ ಹೇಳುತ್ತಾ ಅಭ್ಯರ್ಥಿಗಳ ಪಟ್ಟಿ ಮುಂದೂಡುತ್ತಿರುವುದು ಆಕಾಂಕ್ಷಿಗಳಲ್ಲಿ ಹಲವು ರೀತಿಯ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.

ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರವನ್ನು ತಮ್ಮ ಪುತ್ರ ಹಾಗೂ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಬಿಟ್ಟುಕೊಟ್ಟಿದ್ದಾರೆ. ನಿನ್ನೆ ಈ ವಿಚಾರವನ್ನು ಅನಿತಾಕುಮಾರಸ್ವಾಮಿ ಅ„ಕೃತವಾಗಿ ಪ್ರಕಟಿಸಿ, ತಮಗೆ, ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ನೀಡಿದ ಬೆಂಬಲ ಹಾಗೂ ಸಹಕಾರವನ್ನು ತಮ್ಮ ಪುತ್ರನಿಗೂ ನೀಡುವಂತೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

ಈಗಾಗಲೇ ಆಯ್ಕೆ ಮಾಡಿರುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಅಂತಿಮವಲ್ಲ ಎಂದು ದೇವೇಗೌಡರು ಹೇಳಿರುವುದು ಹಲವು ಆಕಾಂಕ್ಷಿಗಳು ಹಿಂಜರಿಯುವಂತೆ ಮಾಡಿದೆ ಎಂಬ ಮಾತುಗಳು ಜೆಡಿಎಸ್ ವಲಯದಲ್ಲಿ ಕೇಳಿಬರುತ್ತಿವೆ.

ಕ್ಷೇತ್ರದಲ್ಲಿ ಸಾಕಷ್ಟು ಶ್ರಮ ವಹಿಸಿ ಪಕ್ಷ ಸಂಘಟನೆ ಹಾಗೂ ಚುನಾವಣೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೊನೆ ಕ್ಷಣದಲ್ಲಿ ಬೇರೊಬ್ಬ ಅಭ್ಯರ್ಥಿ ಕಣಕ್ಕಿಳಿಸಿದರೆ ಏನು ಮಾಡುವುದು ಎಂಬ ಆತಂಕದಲ್ಲಿ ಹಲವರು ಇದೆ. ಪಂಚರತ್ನ ರಥಯಾತ್ರೆ ನಡೆಸಿದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಆ ಅಭ್ಯರ್ಥಿಗಳ ಜತೆಗೂಡಿ ಕುಮಾರಸ್ವಾಮಿ ಪಂಚರತ್ನ ರಥಯಾತ್ರೆಯನ್ನು ಮಾಡಿದ್ದಾರೆ.

ಶ್ರದ್ದಾ ಮಾದರಿಯಲ್ಲಿ ಮತ್ತೆರಡು ಹತ್ಯೆ, ಸಮಾಜವನ್ನು ಬೆಚ್ಚಿಬೀಳಿಸುತ್ತಿರುವ ವಿಕೃತ ಕೊಲೆಗಳು..!

ಕಳೆದ ವರ್ಷದ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲು ಉದ್ದೇಶಿಸಲಾಗಿತ್ತು. ಆದರೆ, ಒಂದಲ್ಲ ಒಂದು ಕಾರಣವನ್ನು ನೀಡುತ್ತಾ ಪದೇ ಪದೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂದೂಡಲಾಗುತ್ತಿದೆ.

ಜನತಾ ಜಲಧಾರೆ ಸಮಾರೋಪ ಸಂದರ್ಭದಲ್ಲಿ ಪ್ರಕಟ ಮಾಡುವುದಾಗಿ ಹೇಳಲಾಗಿತ್ತಾದರೂ ಬಿಡುಗಡೆ ಮಾಡಲಿಲ್ಲ. ಬಳಿಕ ಪಂಚರತ್ನ ರಥಯಾತ್ರೆ ಪ್ರಾರಂಭದ ದಿನ ಸಂಭವನೀಯ ಅಭ್ಯರ್ಥಿಗಳಿಂದ ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿಸಿ ಪಟ್ಟಿ ಪ್ರಕಟಿಸಲು ಯೋಜಿಸಲಾಗಿತ್ತು.

ಕೊನೆ ಕ್ಷಣದಲ್ಲಿ ಪಟ್ಟಿ ಬಿಡುಗಡೆ ಪ್ರಾಶಸ್ತ್ಯವಾಗಿಲ್ಲ ಎಂಬ ಕಾರಣ ನೀಡೀ ಮುಂದೂಡಲಾಗಿತ್ತು. ರಾಮನಗರದಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಆಗಲೂ ಅಭ್ಯರ್ಥಿಗಳ ಪಟ್ಟಿ ಬಹಿರಂಗಗೊಳ್ಳಲಿಲ್ಲ. ಇದೇ ರೀತಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ವಿಳಂಬವಾಗುತ್ತದೆಯೋಅಥವಾ ಪ್ರಕಟವಾಗುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

#AssemblyElection2023 #AssemblyElection #KarnatakaAssemblyElection #KarnatakaElections2023 #ವಿಧಾನಸಭೆಚುನಾವಣೆ #ವಿಧಾನಸಭೆಚುನಾವಣೆ2023

Articles You Might Like

Share This Article