Friday, November 22, 2024
Homeರಾಜ್ಯಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್ ವಾಗ್ದಾಳಿ

ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್ ವಾಗ್ದಾಳಿ

ಬೆಂಗಳೂರು,ಅ. 9- ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎರಡೂವರೆ ವರ್ಷ ಮುಖ್ಯಮಂತ್ರಿಯಾಗುತ್ತೇನೆಂದು ಹೇಳುವ ಎದೆಗಾರಿಕೆ ತೋರುತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡರು ಇಂದಿಲ್ಲಿ ಟೀಕಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಅವರು ಉತ್ತರನ ಪೌರುಷವಿದ್ದಂತೆ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗುವ ಹೇಳಿಕೆಯ ಧೈರ್ಯವೂ ತೋರಲಿಲ್ಲ ಎಂದು ವ್ಯಂಗ್ಯವಾಡಿದರು.

ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರು, ಎಸ್‍ಎಂ ಕೃಷ್ಣ, ಡಿವಿ ಸದಾನಂದ ಗೌಡ, ಎಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಒಮ್ಮೆ ಅವಕಾಶ ಕೊಡಿ ನಾನು ಸಿಎಂ ಆಗುತ್ತೇನೆ ಎಂದು ಕೋರಿದ್ದರು. ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಉಪಮುಖ್ಯಮಂತ್ರಿ ಆಗಿದ್ದಾರೆ, ಆದರೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಾವೇ ಮುಖ್ಯಮಂತ್ರಿ ಎನ್ನುತ್ತಾರೆ. ಕೆಎನ್ ರಾಜಣ್ಣ ಮೂವರು ಉಪಮುಖ್ಯಮಂತ್ರಿಗಳಾಬೇಕು ಎಂದರೆ, ಮಾಜಿ ಸಚಿವ ಬಸವರಾಜರಾಯರೆಡ್ಡಿ 6 ಮಂದಿ ಉಪಮುಖ್ಯಮಂತ್ರಿಗಳಾಗಲಿ ಎಂದು ಹೇಳಿಕೆ ನೀಡಿದ್ದಾರೆ.

ಫೈಟರ್ ಮನಮೋಹಕ, ಗೆದ್ದ ನಿರ್ಮಾಪಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬರ ಸಮಾವೇಶದಲ್ಲಿ ಕಾವೇರಿಯಿಂದ ಕನ್ಯಾಕುಮಾರಿಯವರೆಗೂ ಕುರುಬ ಸಮುದಾಯವಿದೆ. ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ.ಆದರೆ ಐದು ವರ್ಷ ಅಧಿಕಾರದಲ್ಲಿ ಮುಂದುವರಿಯುವುದಾಗಿ ಸಂದರ್ಶನದಲ್ಲಿ ಹೇಳಿದ್ದಾರೆ. ಆದರೆ ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಎಲ್ಲಿ ಸಿಗುತ್ತದೆ ಎಂದು ಪ್ರಶ್ನಿಸಿದರು. ಪರಿಹಾರ ಸಿಕ್ಕಿಲ್ಲ ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಭೀಕರ ಬರಗಾಲವಿದ್ದು, 40 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದರೂ ಇದುವರೆಗೂ ರಾಜ್ಯ ಸರ್ಕಾರ ಬೆಳೆನಷ್ಟ ಪರಿಹಾರ ನೀಡಿಲ್ಲ.

ಬರಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿ ರೈತರಿಗೆ, ಜನರಿಗೆ ಧೈರ್ಯ ತುಂಬಿಲ್ಲ. ರೈತರ ಸ್ಥಿತಿ ರಾಜ್ಯದಲ್ಲಿ ಜೀವನ್ಮರಣದ ಪರಿಸ್ಥಿತಿ ಉಂಟಾಗಿದೆ. ಕೃಷಿ ಪಂಪ್ ಸೆಟ್‍ಗಳಿಗೆ 7 ಗಂಟೆ ಬದಲಿಗೆ 2 ಗಂಟೆ ಮಾತ್ರ ವಿದ್ಯುತ್ ನೀಡುತ್ತಿದ್ದಾರೆ. 10 ಸಾವಿರ ರೂ. ಕಟ್ಟಿದರೆ ಕೃಷಿ ಪಂಪ್ ಸೆಟ್‍ಗೆ ವಿದ್ಯುತ್ ಸಂಪರ್ಕ ದೊರಕುತ್ತಿತ್ತು.

ಈಗ ನಾಲ್ಕರಿಂದ 5 ಲಕ್ಷ ರೂ. ಕಟ್ಟಬೇಕಾಗಿದೆ. ರೈತರು ಸ್ವಂತ ಜಮೀನಿನಲ್ಲಿ ಮನೆ ಕಟ್ಟಿಕೊಂಡರೆ ನಿರಂತರ ಜ್ಯೋತಿ ನೀಡುವುದಿಲ್ಲ. ಇಂತಹ ಸರ್ಕಾರ ಇರಬೇಕೇ ಎಂದು ಪ್ರಶ್ನಿಸಿದರು. ಆಸ್ಪತ್ರೆ, ಶಾಲೆ, ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ, ಮದ್ಯದ ಪಾಪದ ಹಣದಿಂದ ಸರ್ಕಾರ ನಡೆಸಬೇಕೇ ಎಂದು ಕಾಂಗ್ರೆಸ್ ಮುಖಂಡರೇ ಹೇಳಿದ್ದಾರೆ.

ಲಡಾಕ್ ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು

ಮೈಸೂರಿನಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗೆ ಬಸವಣ್ಣ ಪ್ರೇರಣೆ ಎಂದಿದ್ದಾರೆ. ಬಸವಣ್ಣನವರು ಕಾಯಕ ಮಾಡಿ ಬದುಕಬೇಕು ಎಂದು ಹೇಳಿದ್ದರೆ ಹೊರತು ಬಿಟ್ಟಿಭಾಗ್ಯದಿಂದಲ್ಲ ಎಂದರು.

RELATED ARTICLES

Latest News