ಜನತಾ ಮಿತ್ರ ಸಮಾರೋಪ : ನಾಳೆ ಜೆಡಿಎಸ್ ಸಭೆ

Social Share

ಬೆಂಗಳೂರು,ಆ.28-ಪಂಚರತ್ನ ಕಾರ್ಯಕ್ರಮ ಪ್ರಾರಂಭಿಸುವುದು ಹಾಗೂ ಜನತಾಮಿತ್ರ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಸುವ ಸಂಬಂಧ ನಾಳೆ ಜೆಡಿಎಸ್‍ನ ಮಹತ್ವದ ಸಭೆ ನಡೆಯಲಿದೆ. ನಾಳೆ ಮಧ್ಯಾಹ್ನ ಜೆಪಿಭವನದಲ್ಲಿ ನಡೆಯುವ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಮುಖಂಡರು ಹಾಗೂಪಕ್ಷದ ಪ್ರಮುಖರನ್ನು ಸಭೆಗೆ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಪಂಚರತ್ನ ಕಾರ್ಯಕ್ರಮವನ್ನು ಮುಂದೂಡುತ್ತಾ ಬರಲಾಗುತ್ತಿತ್ತು.

ಮಳೆಯ ಪ್ರಮಾಣ ತಗ್ಗಿದ ಕೂಡಲೇ ಪಂಚರತ್ನ ಕಾರ್ಯಕ್ರಮವನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಮೈಸೂರಿನ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪಂಚರತ್ನ ಕಾರ್ಯಕ್ರಮವನ್ನು ಆರಂಭಿಸಲು ಉದ್ದೇಶಿಸಲಾಗಿದೆ.
ನಾಳಿನ ಸಭೆಯಲ್ಲಿ ಪಂಚರತ್ನ ಕಾರ್ಯಕ್ರಮದ ರೂಪುರೇಷೆ, ಯಾವ ಯಾವ ಮಾರ್ಗದಲ್ಲಿ ಹೋಗಬೇಕು, ಕಾರ್ಯಕ್ರಮದ ಸ್ವರೂಪ ಹೇಗಿರಬೇಕು ಎಂಬ ಬಗ್ಗೆ ಚರ್ಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ.

ಅಲ್ಲದೆ ಮುಂಬರುವ ಚುನಾವಣೆಯಲ್ಲಿ ಸ್ರ್ಪಸುವ ಆಕಾಂಕ್ಷಿಗಳಿಗೆ ಪಂಚರತ್ನ ಕಾರ್ಯಕ್ರಮದ ಹೊಣೆಯನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಅಲ್ಲದೆ ಬೆಂಗಳೂರಿನಲ್ಲಿ ಆರಂಭಿಸಿರುವ ಜನತಾ ಮಿತ್ರ ಕಾರ್ಯಕ್ರಮದ ಸಮಾರೋಪವನ್ನು ಗಣೇಶ ಹಬ್ಬದ ನಂತರ ನಡೆಸಲು ಉದ್ದೇಶಿಸಲಾಗಿದ್ದು, ಸ್ಥಳ ಮತ್ತು ದಿನಾಂಕವನ್ನು ಅಂತಿಮಗೊಳಿಸಲಾಗುತ್ತದೆ. ಸುಮಾರು ಒಂದು ಲಕ್ಷ ಜನರನ್ನು ಸೇರಿಸಿ ಯಶಸ್ವಿಯಾಗಿ ಮಾಡಬೇಕೆಂಬ ಉದ್ದೇಶವನ್ನುಜೆಡಿಎಸ್ ಹೊಂದಿದೆ.

Articles You Might Like

Share This Article