ಜಲಧಾರೆ-ಮೇಕೆದಾಟು ಯೋಜನೆ ಕುರಿತು ಜೆಡಿಎಸ್ ಸಭೆ

Social Share

ಬೆಂಗಳೂರು,ಮಾ.4- ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನ ಮಂಡಲದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಇಂದು ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯವಾಗಿ ಮೇಕೆದಾಟು ಯೋಜನೆಗೆ ಅನುಸರಿಸಬೇಕಾದ ಕಾರ್ಯತಂತ್ರ ಹಾಗೂ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕಿರುವ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಎಲ್ಲರೂ ಕಡ್ಡಾಯವಾಗಿ ಕಲಾಪದಲ್ಲಿ ಹಾಜರಿದ್ದು, ತಮ್ಮ ಕ್ಷೇತ್ರದ ಹಾಗೂ ರಾಜ್ಯದ ಸಮಸ್ಯೆಗಳನ್ನು ಪ್ರಸ್ತಾಪಿಸಿ, ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು. ಕಲಾಪದಲ್ಲಿ ಪಕ್ಷದ ನಿಲುವುಗಳನ್ನು ಪ್ರಬಲವಾಗಿ ಪ್ರತಿಪಾದಿಸ ಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.
# ಜನತಾ ಜಲಧಾರೆ:
ಪ್ರಮುಖವಾಗಿ ಜೆಡಿಎಸ್ ಪಕ್ಷ ಕೈಗೆತ್ತಿಕೊಂಡಿರುವ ಜನತಾ ಜಲಧಾರೆ ಗಂಗಾ ರಥಯಾತ್ರೆ ಬಗ್ಗೆ ಸಮಾಲೋಚನೆ ನಡೆಸಲಾಯಿತು.ಈ ವೇಳೆ ಆದಷ್ಟು ಬೇಗ ಗಂಗಾ ರಥಯಾತ್ರೆ ಕೈಗೊಳ್ಳಬೇಕೆಂದು ಎಲ್ಲ ಶಾಸಕರು ಮನವಿ ಮಾಡಿದರು.
ಜಲಧಾರೆ ಯಾತ್ರೆ ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಲ್ಲಿ ನೆರವಾಗುತ್ತದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯಕ್ಕೆ ನೀಡಿರುವ ಆವಿಸ್ಮರಣೀಯ ಕೊಡುಗೆಗಳನ್ನು ಜನತೆಗೆ ತಿಳಿಸಬೇಕು ಎಂದು ಶಾಸಕರು ಅಭಿಪ್ರಾಯಪಟ್ಟರು.
ಹೆಚ್.ಕೆ.ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಖಾಶ0ಪೂರ, ಸಚೇತಕರಾದ ವೆಂಕಟರಾವ್ ನಾಡಗೌಡ, ಗೋವಿಂದರಾಜು ಮುಂತಾದವರು ಹಾಜರಿದ್ದರು.

Articles You Might Like

Share This Article