Wednesday, December 6, 2023
Homeರಾಜ್ಯರೇಸಾರ್ಟ್‍ನಲ್ಲಿ ಜೆಡಿಎಸ್ ಶಾಸಕರ ವಾಸ್ತವ್ಯ

ರೇಸಾರ್ಟ್‍ನಲ್ಲಿ ಜೆಡಿಎಸ್ ಶಾಸಕರ ವಾಸ್ತವ್ಯ

ಬೆಂಗಳೂರು, ನ.8-ಆಪರೇಷನ್ ಹಸ್ತ ನಡೆಸುವ ಸುಳಿವಿನ ಬೆನ್ನಲೇ ಜೆಡಿಎಸ್ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದಾರೆ. ನಿನ್ನೆಯಿಂದ ಹಾಸನದ ರೆಸಾರ್ಟ್‍ನಲ್ಲಿ ಬೀಡು ಬಿಟ್ಟಿರುವ ಜೆಡಿಎಸ್ ಶಾಸಕರು ಪಕ್ಷ ಸಂಘಟನೆ, ಬಿಜೆಪಿಯೊಂದಿಗಿನ ಮೈತ್ರಿ, ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ.

ಹಾಸನಾಂಬೆಯ ದರ್ಶನ ಪಡೆದಿರುವ ಜೆಡಿಎಸ್ ಶಾಸಕರು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇತೃತ್ವದಲ್ಲಿ ಒಗ್ಗಟ್ಟಿನ ಪ್ರದರ್ಶನ ಮಾಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಪಕ್ಷದ ಶಾಸಕರಿಗೆ ಮಾರ್ಗದರ್ಶನ ಮಾಡಿದ್ದಾರೆ.

ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್

ಆಸೆ, ಆಮಿಷಗಳಿಗೆ ಒಳಗಾಗಬೇಡಿ, ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಜನಪರ ಹೋರಾಟ ಮಾಡಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡೋಣ. ಮುಂದೆ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ ಎಂಬ ಸಂದೇಶ ನೀಡಿದ್ದಾರೆ.

ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ರಾಷ್ಟ್ರೀಯ ಪಕ್ಷಗಳಲ್ಲಾಗುತ್ತಿರುವ ಬದಲಾವಣೆ ಸೇರಿದಂತೆ ಹಲವು ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಪಕ್ಷಕ್ಕೆ ಆಗುತ್ತಿರುವ ಲಾಭ, ನಷ್ಟದ ಲೆಕ್ಕಾಚಾರವನ್ನು ಮಾಡಲಾಗಿದೆ. ಲೋಕಸಭಾ ಚುನಾವಣೆಯ ಸಾಧಕ-ಬಾಧಕಗಳ ಬಗ್ಗೆ ಸಮಾಲೋಚಿಸಿ ಒಗ್ಗಟ್ಟಿನಿಂದ ಪಕ್ಷದ ಬೆಳವಣಿಗೆಗೆ ಶ್ರಮಿಸಲು ತೀರ್ಮಾನಿಸಲಾಗಿದೆ. ಯಾವುದೇ ಕಾರಣಕ್ಕೂ ಪಕ್ಷಾಂತರಕ್ಕೆ ಮುಂದಾಗಿ ಶಾಸಕ ಸ್ಥಾನ ಕಳೆದುಕೊಳ್ಳಬೇಡಿ ಎಂಬ ಕಿವಿ ಮಾತು ಹೇಳಿದ್ದಾರೆ.

ಆಪರೇಷನ್ ಹಸ್ತ ಮಾಡಲಾಗುತ್ತದೆ ಎಂಬ ಉಹಾಪೋಹದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರು ಹಾಸನಾಂಬೆ ಸನ್ನಿಯಲ್ಲಿ ಒಟ್ಟಾಗಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

RELATED ARTICLES

Latest News