Friday, May 3, 2024
Homeರಾಜ್ಯನಾಳೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ನಾಳೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರು, ಡಿ.8- ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ನಾಳೆ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ನಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಆಗಮಿಸುವಂತೆ ಎಲ್ಲಾ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೆ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್ ಅವರು ಆಹ್ವಾನ ನೀಡಿದ್ದಾರೆ.

ಎನ್‍ಡಿಎ ಮೈತ್ರಿಕೂಟ ಸೇರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ ಬೆನ್ನಲ್ಲೇ ಜೆಡಿಎಸ್‍ನಲ್ಲಿ ಉಂಟಾಗಿರುವ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾಳೆ ನಡೆಯುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಭಾರೀ ಮಹತ್ವ ಪಡೆದುಕೊಂಡಿದ್ದು, ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ.

ಎನ್‍ಡಿಎ ಮೈತ್ರಿಕೂಟ ಸೇರುವುದನ್ನು ವಿರೋಧಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರು, ಪ್ರತ್ಯೇಕ ಸಭೆ ನಡೆಸಿ ನಮ್ಮದೇ ಒರ್ಜಿನಲ್ ಜನತಾದಳವೆಂದು ಘೋಷಿಸಿಕೊಂಡು ಪಕ್ಷದ ನಾಯಕರಿಗೆ ಸಡ್ಡು ಹೊಡೆದಿದ್ದರು. ಜೊತೆಗೆ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿ.ಕೆ.ನಾನು ನೇತೃತ್ವದಲ್ಲಿ ಕೇರಳದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಿದ್ದು, ಎನ್‍ಡಿಎ ಮೈತ್ರಿಕೂಟದಿಂದ ಹೊರಬರಲು ಡಿಸೆಂಬರ್ 10ರ ಗಡುವು ನೀಡಲಾಗಿತ್ತು.

ಈ ಸಂಬಂಧ ಸಿ.ಕೆ.ನಾನು ಅವರು ದೇವೇಗೌಡರಿಗೆ ಪತ್ರವನ್ನು ಬರೆದು ಸಭೆಯ ನಿರ್ಣಯವನ್ನು ತಿಳಿಸಿದ್ದರು. ಅಲ್ಲದೆ, ಡಿ.11ರಂದು ಮತ್ತೆ ರಾಷ್ಟ್ರ ಮಟ್ಟದ ಸಮಗ್ರವಾದ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ.

ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರುವುದರಿಂದ ಜೆಡಿಎಸ್‍ನ ಜಾತ್ಯತೀತ ನಿಲುವಿಗೆ ಧಕ್ಕೆಯಾಗಲಿದೆ ಎಂದು ಇಬ್ರಾಹಿಂ ಹೇಳಿದರೆ, ಬಿಜೆಪಿ ಜೊತೆಗೆ ಹೋಗುವುದರಿಂದ ಪಕ್ಷದ ಜಾತ್ಯತೀತ ಸಿದ್ಧಾಂತಕ್ಕೆ ಧಕ್ಕೆಯಾಗುವುದಿಲ್ಲ ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದರು.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಪಕ್ಷ ವಿರೋ ಚಟುವಟಿಕೆಗಳ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತ್ತು ಮಾಡಿದ್ದಾರೆ. ಇದಕ್ಕೂ ಮುನ್ನ ಇಬ್ರಾಹಿಂ ನಾವೇ ಒರ್ಜಿನಲ್ ಜೆಡಿಎಸ್ ಎಂದು ಹೇಳಿಕೆ ನೀಡಿದ ಸಂದರ್ಭದಲ್ಲಿ ಪಕ್ಷದ ರಾಜ್ಯ ಘಟಕವನ್ನೇ ಗೌಡರು ವಿಸರ್ಜಿಸಿ, ಇಬ್ರಾಹಿಂ ಅವರಿಗೆ ಅಧಿಕಾರವಿಲ್ಲದಂತೆ ಮಾಡಿದ್ದರು. ಹಂಗಾಮಿ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ನೇಮಕಗೊಂಡಿದ್ದಾರೆ.

ಇಂದಿರಾ ಕ್ಯಾಂಟಿನ್‍ನಲ್ಲಿ ಚಪಾತಿ, ಮುದ್ದೆ, ಬಸ್ಸಾರು ಭಾಗ್ಯ

ಕಾನೂನಾತ್ಮಕ ಬಿಕಟ್ಟು ಉಂಟಾಗದಂತೆ ಪಕ್ಷದ ಸಿದ್ಧಾಂತ ಹಾಗೂ ನಿಯಮಗಳಿಗೆ ಅನುಗುಣವಾಗಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸುವ ಮೂಲಕ ಸೂಕ್ತ ನಿರ್ಣಯ ಕೈಗೊಳ್ಳಲು ಉದ್ದೇಶಿಸಲಾಗಿದೆ. ಮುಂದೆ ಎದುರಾಗಬಹುದಾದ ತೊಡಕುಗಳ ನಿವಾರಣೆಗೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಚುನಾವಣಾ ಮೈತ್ರಿ ಮಾಡಿಕೊಂಡಿದ್ದು, ಕ್ಷೇತ್ರಗಳ ಹಂಚಿಕೆ ಮಾತ್ರ ಬಾಕಿ ಉಳಿದಿದೆ. ಈ ಹಂತದಲ್ಲಿ ಇಬ್ರಾಹಿಂ ಬಣದಿಂದ ಯಾವುದೇ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್. ಡಿ. ಕುಮಾರಸ್ವಾಮಿ ಯವರು ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯ ಕಾರಿಣಿ ಸಮಿತಿ ಸದಸ್ಯರುಗಳು ಉಪಸ್ಥಿತರಿರು ತ್ತಾರೆ ಎಂದು ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬೆಂಗಳೂರು ನಗರದ ಪಕ್ಷದ ಮುಖಂಡರು , ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪದಾಕಾರಿ ಗಳು, ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ರ್ಪಸಿದ್ದ ಅಭ್ಯರ್ಥಿಗಳು ಹಾಗೂ ಬಿಬಿಎಂಪಿ ಮಾಜಿ ಸದಸ್ಯರು ಸಭೆಗೆ ಆಗಮಿಸುವಂತೆ ಅವರು ಕೋರಿದ್ದಾರೆ.

RELATED ARTICLES

Latest News