ಅ.27ಕ್ಕೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

Social Share

ಬೆಂಗಳೂರು,ಅ.23- ಜೆಡಿಎಸ್‍ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಅ.27ರಂದು ನಡೆಯಲಿದ್ದು, ಅಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮರು ಆಯ್ಕೆಯಾಗುವ ಸಾಧ್ಯತೆಗಳಿವೆ.

ನಗರದ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿಂದು ಸಂಜೆ 4.30ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆಯಲಾಗಿದೆ. ಈ ಸಭೆಗೆ ಶಾಸಕರು, ಸಂಸದರು, ಕರ್ನಾಟಕ, ಕೇರಳ, ಬಿಹಾರ, ಅಂಧ್ರಪ್ರದೇಶ ಸೇರಿದಂತೆ 12 ರಾಜ್ಯಗಳ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಪರಿಷತ್ ಸದಸ್ಯರು, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಹಾಗೂ ಜಿಲ್ಲಾಧ್ಯಕ್ಷರನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆ, ಪಕ್ಷ ಸಂಘಟನೆ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ.

ಅ.28ರಂದು ಬೆಳಗ್ಗೆ 10.30ಕ್ಕೆ ರಾಷ್ಟ್ರೀಯ ಸಮಗ್ರ ಅವೇಶನ ನಡೆಯಲಿದೆ. ಈ ಅಧಿವೇಶನದಲ್ಲೂ ರಾಜ್ಯ ವಿಧಾನಸಭೆ ಸೇರಿದಂತೆ ಮುಂಬರುವ ಚುನಾವಣೆಗಳ ಸಿದ್ದತೆ, ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗುತ್ತದೆ.

ಬಿಜೆಪಿ ಜನ ಸಂಕಲ್ಪ ಯಾತ್ರೆ ರದ್ದು

ನ.1ರಿಂದ ಪ್ರಾರಂಭಿಸಲಿರುವ ಜೆಡಿಎಸ್‍ನ ಮಹತ್ವದ ಪಂಚರತ್ನ ರಥಯಾತ್ರೆ ರೂಪುರೇಷೆ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ. ಅಲ್ಲದೆ ರಾಷ್ಟ್ರೀಯ ಪಕ್ಷಗಳಿಗೆ ಸರಿಸಮಾನಾಗಿ ಜೆಡಿಎಸ್‍ನ್ನು ತಳಮಟ್ಟದಿಂದ ಸಂಘಟಿಸುವ ಬಗ್ಗೆ ಚಿಂತನಮಂಥನ ನಡೆಸಲಾಗುತ್ತದೆ.

ಒಂದೇ ಉಡಾವಣೆಯಲ್ಲಿ 36 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

ಜೊತೆಗೆ ಇತ್ತೀಚೆಗೆ ನಡೆಸಿದ ಜನತಾ ಜಲಧಾರೆ , ಜನತಾ ಮಿತ್ರ ಕಾರ್ಯಕ್ರಮಗಳ ಅವಲೋಕನವನ್ನು ಮಾಡಲಾಗುತ್ತದೆ. ಮುಂಬರುವ ವಿಧಾನಸಭೆಗೆ ಚುನಾವಣೆಗೆ ಪಕ್ಷದ ಸಿದ್ದತೆ ಹಾಗೂ ಅಭ್ಯರ್ಥಿಗಳ ಆಯ್ಕೆ ವಿಧಾನದ ಬಗ್ಗೆಯೂ ಪರಾಮರ್ಶೆ ಮಾಡಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Articles You Might Like

Share This Article