ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆ ಜಾರಿ

Social Share

ಬೆಂಗಳೂರು, ಜ.20- ಪಂಚರತ್ನ ರಥಯಾತ್ರೆ ಮೂಲಕ ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಆರಂಭಿಸಿರುವ ಜೆಡಿಎಸ್ ರಾಜ್ಯ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ತರುವ ಭರವಸೆಯನ್ನು ನೀಡುತ್ತಿದೆ.

ರಾಜ್ಯ ಸಮಗ್ರ ಅಭಿವೃದ್ಧಿಗೆ ಪಂಚ ಯೋಜನೆಗಳನ್ನು ಜಾರಿಗೆ ತರುವ ಭರವಸೆಯೊಂದಿಗೆ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದೆ. ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ವಿರೋಧಿ ಪ್ರತಿಭಟನೆ ನಡೆಸಿದ್ದಾರೆ. ಹಳೇ ಪಿಂಚಣಿ ಯೋಜನೆ ಜಾರಿಗಾಗಿ ಆಗ್ರಹಿಸುತ್ತಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸುವ ಆಶ್ವಾಸನೆಯನ್ನು ನೀಡುತ್ತಿದ್ದು, ಆ ಮೂಲಕ ಸರ್ಕಾರಿ ನೌಕರರನ್ನು ಓಲೈಸುವ ಪ್ರಯತ್ನ ಮಾಡುತ್ತಿದೆ.

ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ತರುವಂತೆ ಮನವಿ ಮಾಡುತ್ತಿದ್ದಾರೆ.

BIG NEWS : ಶೂಟಿಂಗ್ ವೇಳೆ ತಮಿಳು ನಟ ವಿಜಯ್ ಅಂತೋನಿಗೆ ತೀವ್ರ ಗಾಯ

ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಜೆಡಿಎಸ್‍ನಿಂದ ಜನಪರ ಆಡಳಿತ ನಿರೀಕ್ಷಿಸಬಹುದು, ನಾಡಿನ ಜ್ವಲಂತ ಸಮಸ್ಯೆಗಳಿಗೆ ಪ್ರಾದೇಶಿಕ ಪಕ್ಷದ ಆಡಳಿತದಿಂದ ಪರಿಹಾರ ಸಾಧ್ಯ ಎಂಬ ಭರವಸೆಯನ್ನು ನೀಡುತ್ತಿದ್ದಾರೆ.

ಕೋಲಾರದಿಂದ ಆರಂಭಗೊಂಡ ಪಂಚರತ್ನ ರಥಯಾತ್ರೆಯು ಈಗ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಡೆಯುತ್ತಿದೆ. ಎರಡು ಹಂತದ ಯಾತ್ರೆ ಪೂರ್ಣಗೊಳಿಸಿದ್ದು, ಮೂರನೇ ಹಂತದ ಯಾತ್ರೆ ಕೈಗೊಳ್ಳಲಾಗಿದೆ. ಆಯಾ ಕ್ಷೇತ್ರ ಜೆಡಿಎಸ್ ಅಭ್ಯರ್ಥಿಗೊಳೊಂದಿಗೆ ಈ ಯಾತ್ರೆ ನಡೆಸಲಾಗುತ್ತಿದೆ. ಮಾ.20ರವರೆಗೂ ಈ ಯಾತ್ರೆ ನಡೆಯಲಿದೆ.

ಯಾತ್ರೆ ಸಂದರ್ಭದಲ್ಲಿ ಜನ ಸಂಪರ್ಕಸಭೆ, ಗ್ರಾಮ ವಾಸ್ತವ್ಯ, ರ್ಯಾಲಿಗಳ ಮೂಲಕ ಜನರಿಗೆ ಬಹು ನಿರೀಕ್ಷಿತ ಪಂಚರತ್ನ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಇದುವರೆಗೂ ನಡೆದ ಪಂಚರತ್ನ ರಥಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಜೆಡಿಎಸ್ ಹೇಳುತ್ತಿದೆ.

ಪ್ರವೀಣ್ ನೆಟ್ಟಾರು ಹಂತಕರ ಸುಳಿವು ನೀಡುವವರಿಗೆ 5 ಲಕ್ಷ ರೂ. ಬಹುಮಾನ ಘೋಷಣೆ

ನಾಡಿನ ಕೃಷಿ, ನೀರಾವರಿ, ಶಿಕ್ಷಣ, ಆರೋಗ್ಯ, ವಸತಿ, ನಿರುದ್ಯೋಗ ಸೇರಿದಂತೆ ಹಲವು ಸಮಸ್ಯೆಗಳಿಗೆ ಪಂಚರತ್ನ ಯೋಜನೆಗಳು ಪರಿಹಾರವಾಗಲಿವೆ. ಅಧಿಕಾರಕ್ಕೆ ಬಂದು ಐದು ವರ್ಷದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ, ಜೆಡಿಎಸ್ ಪಕ್ಷವನ್ನು ವಿಸರ್ಜಿಸುವುದಾಗಿ ಕುಮಾರಸ್ವಾಮಿ ಜನರಿಗೆ ವಾಗ್ದಾನ ನೀಡುತ್ತಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಶಕ್ತಿ ಮೀರಿ ಪ್ರಯತ್ನ ಪಟ್ಟು ಜನರ ವಿಶ್ವಾಸಗಳಿಸಲು ಯತ್ನಿಸಲಾಗುತ್ತಿದೆ. 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿಯೊಂದಿಗೆ ಪ್ರಚಾರ ಕೈಗೊಳ್ಳಲಾಗುತ್ತಿದೆ.

JDS, old pension scheme, implemented, government, employees, #ಪಂಚರತ್ನ_ರಥಯಾತ್ರೆ

Articles You Might Like

Share This Article