Sunday, May 19, 2024
Homeರಾಜ್ಯ108 ಆ್ಯಂಬುಲೆನ್ಸ್ ಚಾಲಕರಿಗೆ ವೇತನ ನೀಡಿದ ಸರ್ಕಾರಕ್ಕೆ ಕುಟುಕಿದ ಜೆಡಿಎಸ್‌

108 ಆ್ಯಂಬುಲೆನ್ಸ್ ಚಾಲಕರಿಗೆ ವೇತನ ನೀಡಿದ ಸರ್ಕಾರಕ್ಕೆ ಕುಟುಕಿದ ಜೆಡಿಎಸ್‌

ಬೆಂಗಳೂರು,ಮೇ 6- ರಾಜ್ಯದ 108 ಆ್ಯಂಬುಲೆನ್ಸ್ ನಲ್ಲಿ ಕಾರ್ಯ ನಿರ್ವಹಿಸುವ ಚಾಲಕರಿಗೆ ವೇತನ ಕೊಡಿಸುವಂತೆ ಜೆಡಿಎಸ್‌ ಆಗ್ರಹಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಾ ರಾಜ್ಯದ ಒಬ್ಬನೇ ಒಬ್ಬ ಸರ್ಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗುಡುಗಿದ್ದರು ಎಂದಿದೆ.

ಸಿದ್ದರಾಮಯ್ಯ ಅವರೇ ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆ್ಯಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ ಎಂದು ಆಗ್ರಹಿಸಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ ಎಂದು ಟೀಕಿಸಿದೆ.

ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆ ಎನ್ನುವ ಇವರಿಗೆ 108 ಆ್ಯಂಬುಲೆನ್‌್ಸ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ. ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು ಸಾಧ್ಯವಾಗಿಲ್ಲ. ಮೂರು ತಿಂಗಳಿನಿಂದ ಅವರಿಗೆ ವೇತನ ಪಾವತಿ ಮಾಡಿಲ್ಲ ಎಂದರೆ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದೆ.

RELATED ARTICLES

Latest News