ಕನ್ನಡ ರಾಜ್ಯೋತ್ಸವದಂದು ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ

Social Share

ಬೆಂಗಳೂರು,ಅ,24: ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರತಿ ಮನೆಗಳ ಮೇಲು ಕನ್ನಡ ಬಾವುಟ ಹಾರಿಸುವಂತೆ ಕರೆ ಕೊಟ್ಟಿರುವ ಜೆಡಿಎಸ್ ಅಂದೇ ಪಂಚರತ್ನ ರಥಯಾತ್ರೆಗೂ ಚಾಲನೆ ನೀಡಲಿದೆ.

ನವೆಂಬರ್ 1 ರಂದು ಮುಳುಬಾಗಿಲು ವಿಧಾನ ಸಭಾ ಕ್ಷೇತ್ರದ ಕುರುಡುಮಲೆ ಗಣಪತಿ ದೇವಾಲಯದ ಬಳಿ ಮಾಜಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಆಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರು ಸಾರ್ವಜನಿಕರ ಮನೆ ಇಲ್ಲವೆ ಸಾಮಾನ್ಯ ಕಾರ್ಯಕರ್ತರ ಮನೆಯ ಮೇಲೆ ಕನ್ನಡ ಬಾವುಟವನ್ನು ಹಾರಿಸಲಿದ್ದಾರೆ.

ಇದೇ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪಕ್ಷದ ಕಾರ್ಯಕರ್ತರು ಕನ್ನಡ ಬಾಟವನ್ನು ಮನೆಗಳ ಮೇಲೆ ಹಾರಿಸುವಂತೆ ನಿರ್ದೇಶನ ನೀಡಿದ್ದಾರೆ. ಅದೇ ರೀತಿ ನಾಡಿನ ಕನ್ನಡಿಗರೆಲ್ಲೂ ಕನ್ನಡ ಬಾವುಟವನ್ನು ತಮ್ಮ ತಮ್ಮ ಮನೆಗಳ ಮೇಲೆ ಹಾರಿಲು ಕರೆ ನೀಡಿದ್ದಾರೆ.

ಸ್ಪರ್ಧೆಯಿಂದ ಹಿಂದೆ ಸರಿದ ಜಾನ್ಸನ್‌, ರಿಷಿ ಬ್ರಿಟನ್‍ ಪ್ರಧಾನಿಯಾಗೋದು ಫಿಕ್ಸ್

ರಾಜ್ಯೋತ್ಸವದಂದೆ ಕುರುಡುಮಲೆಯ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಮಾಜಿ ಪ್ರಧಾನಿ ಹೆಚ್‍ಡಿ.ದೇವೇಗೌಡರು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪಕ್ಷದ ರಾಜ್ಯಾಧ್ಯಕರು ಸೇರಿದಂತೆ ಎಲ್ಲಾ ಶಾಸಕರು ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಪಂಚರತ್ನ ರಥಯಾತ್ರೆಗೆ ವಿಶೇಷ ರೀತಿಯಲ್ಲಿ 8 ರಥಗಳನ್ನು ವಿನ್ಯಾಸಗೊಳಿಸಲಾಗಿದೆ. ಮುಳುಬಾಗಿಲುನಿಂದ ಆರಂಭವಾಗುವ ರಥಯಾತ್ರೆಯು ರಾಜ್ಯದ ಎಲ್ಲಾ ಕ್ಷೇತ್ರದ ಸಂಚರಿಸಲಿವೆ.

ಮಹಿಳೆಗೆ ಸೋಮಣ್ಣ ಕಪಾಳಮೋಕ್ಷ, ಬಿಜೆಪಿ ನಾಯಕರು ಹೇಳೋದೇನು..?

ಮುಂಬರುವ ವಿಧಾನಸಭಾ ಚುನಾವಣೆಯ ಪಕ್ಷದ ಅಭ್ಯರ್ಥಿ ತಮ್ಮ ತಮ್ಮ ಕ್ಷೇತ್ರದ ರಥಯಾತ್ರೆಯ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ಹೆಚ್‍ಡಿ. ಕುಮಾರಸ್ವಾಮಿ ಪಂಚರತ್ನ ಯೋಜನೆಯನ್ನು ಜನರ ಮುಂದಿಟ್ಟು ಜೆಡಿಎಸ್‍ಗೆ ಅಧಿಕಾರ ನೀಡುವಂತೆ ಕೋರುತ್ತಿದ್ದಾರೆ. ರಥಯಾತ್ರೆ ಸಂದರ್ಭದಲ್ಲಿ ಸ್ಥಳೀಯವಾಗಿ ಸಾರ್ವಜನಿಕರಿಂದ ಅಭಿಪ್ರಯಾವನ್ನು ಸಂಗ್ರಹಿಸಲಾಗುತ್ತದೆ.

ಸಾರ್ವಜನಿಕವಾಗಿ ವ್ಯಕ್ತವಾಗುವ ಸಲಹೆ ಸೂಚನೆಗಳನ್ನು ಪಕ್ಷದ ಚುನಾವಣಾ ಪ್ರಣಾಳಿಯಲಿ ಅಳವಡಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Articles You Might Like

Share This Article