ಜೆಡಿಎಸ್ ಪಂಚರತ್ನ ರಥಯಾತ್ರೆಗೆ ವ್ಯಾಪಕ ಜನಬೆಂಬಲ

Social Share

ಬೆಂಗಳೂರು,ನ.30-ಮುಂಬರುವ ವಿಧಾನ ಚುನಾವಣೆಯಲ್ಲಿ ಬಹುಮತಗಳಿಸಿ ಸ್ವಂತ ಶಕ್ತಿಯ ಮೇಲೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂಬ ಮಹದಾಸೆ ಹೊಂದಿರುವ ಜೆಡಿಎಸ್ ಆರಂಭಿಸಿರುವ ಮೊದಲ ಹಂತದ ಪಂಚರತ್ನ ರಥಯಾತ್ರೆಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದೆ.

ನ.18ರಂದು ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭವಾದ ಪಂಚರತ್ನ ರಥಯಾತ್ರೆಯು ಈಗಾಗಲೇ ಮೂರು ಜಿಲ್ಲೆಗಳ ಹದಿಮೂರು ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ನಡೆಸಿದೆ. ಜನತಾ ಜಲಧಾರೆಯ ಮಾದರಿಯಲ್ಲೇ ಈ ಯಾತ್ರೆಗೂ ಪ್ರತಿ ಕ್ಷೇತ್ರದಲ್ಲಿ ಅಪಾರ ಪ್ರಮಾಣದಲ್ಲಿ ಜನರು ಸೇರುತ್ತಿದ್ದಾರೆ.

ಜತೆಗೆ ಕುಮಾರಸ್ವಾಮಿ ಅವರನ್ನು ವಿವಿಧ ಜಾನಪದ ಕಲಾತಂಡಗಳ ಪ್ರದರ್ಶನ, ಹಣ್ಣು, ತರಕಾರಿ, ಹೂವಿನ ಬೃಹತ್ ಹಾರ, ಪೂರ್ಣ ಕುಂಭದ ಸ್ವಾಗತವನ್ನು ನೀಡಲಾಗುತ್ತಿದೆ.

ಬಸ್ – ಟ್ರಕ್ ನಡುವೆ ಭೀಕರ ಅಪಘಾತ: ಆರು ಮಂದಿ ಸಾವು

ಪಂಚರತ್ನ ರಥಯಾತ್ರೆಯು 13ನೇ ದಿನಕ್ಕೆ ಪಾದಾರ್ಪಣೆ ಮಾಡಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪೂರ್ಣಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕ್ಷೇತ್ರದಿಂದ ನೆಲಮಂಗಲ ಕ್ಷೇತ್ರಕ್ಕೆ ಆಗಮಿಸಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಗುರಿಯೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ಕೈಗೊಂಡಿದ್ದು, ಜೆಡಿಎಸ್ ಚುನಾವಣಾ ಪ್ರಚಾರವನ್ನೇ ನಡೆಸುತ್ತಿದೆ.

ಮುಂದಿನ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕುಮಾರಸ್ವಾಮಿ, ಜೆಡಿಎಸ್‍ಗೆ ಬಲತುಂಬುವ ಕಾರ್ಯದಲ್ಲಿ ಹಗಲು ರಾತ್ರಿಯನ್ನೇ ಶ್ರಮ ಹಾಕುವ ಮೂಲಕ ಪಕ್ಷ ಸಂಘಸುತ್ತಿದ್ದಾರೆ. ಆ ಮೂಲಕ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಹೊಸ ಹುರುಪು ಮೂಡಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ರಾಷ್ಟ್ರೀಯ ಪಕ್ಷಗಳಿಂದ ಸಮಾನ ದೂರ ಕಾಯ್ದುಕೊಂಡಿರುವ ಜೆಡಿಎಸ್, ಆರೋಪ ಮತ್ತು ಪ್ರತ್ಯಾರೋಪಗಳಿಗಿಂತ ಹೆಚ್ಚಾಗಿ ಜನರ ಸಮಸ್ಯೆ ಆಲಿಸಿ ಪರಿಹಾರ ರೂಪಿಸುವ ಕಡೆಗೆ ಗಮನ ಹರಿಸಿರುವುದು ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಪಂಚರತ್ನ ರಥಯಾತ್ರೆಗೆ ದೊರೆಯುತ್ತಿರವ ಜನ ಬೆಂಬಲವನ್ನು ಗಮನಿಸಿದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಕಿಕೊಂಡಿರುವ ನಿಗದಿತ ಗುರಿಯನ್ನು ಜೆಡಿಎಸ್ ತಲುಪದಿದ್ದರೂ ಚೇತರಿಸಿಕೊಳ್ಳುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಆಯಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳೊಂದಿಗೆ ಕುಮಾರಸ್ವಾಮಿ ನಿರಂತರವಾಗಿ ಈ ಯಾತ್ರೆ ಕೈಗೊಂಡು, ನಿತ್ಯ ಒಂದು ಗ್ರಾಮದಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಜತೆಗೆ ಬಹಿರಂಗ ಸಭೆ, ಮೆರವಣಿಗೆ ಹಾಗೂ ಗ್ರಾಮಸಭೆಗಳ ಮೂಲಕ ಸ್ಥಳೀಯವಾಗಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ.

ರಾಜ್ಯದ ಬಹುತೇಕ ಸಮಸ್ಯೆಗಳಿಗೆ ಪಂಚರತ್ನ ಯೋಜನೆಗಳು ಪರಿಹಾರವಾಗಲಿವೆ ಎಂಬ ಭರವಸೆ ನೀಡಿ ಐದು ವರ್ಷಗಳ ಕಾಲ ಸ್ವಂತ ಬಲದ ಮೇಲೆ ಆಡಳಿತ ನಡೆಸುವಂತೆ ಆಶೀರ್ವಾದ ಮಾಡಿ ಎಂದು ಜನರನ್ನು ಕೋರುತ್ತಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ ಪಂಚರತ್ನ ಯಾತ್ರೆ, ಗ್ರಾಮಸಭೆ, ಮೆರವಣಿಗೆಗಳಿಗೆ ನಿರೀಕ್ಷೆಗೂ ಮೀರಿದ ಜನರು ಆಗಮಿಸಿರುವುದು ಪಂಚರತ್ನಕ್ಕೆ ಸೂರ್ತಿ ತುಂಬಿದಂತಾಗಿದೆ. ಅಲ್ಲದೆ, ಅಭೂತಪೂರ್ವ ಯಶಸ್ಸು ದೊರೆಯುತ್ತಿರುವುದು ನಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಾಳೆಯಿಂದ ಬೆಂಗಳೂರಿನಲ್ಲಿ ಡಿಜಿಟಲ್ ರುಪಿ ಚಲಾವಣೆ

ಈ ಯಾತ್ರೆ ಸಂದರ್ಭದಲ್ಲಿ ನಿತ್ಯವೂ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಕೃಷಿ ಉತ್ಪನ್ನಕ್ಕೆ ಯೋಗ್ಯ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಆರೋಗ್ಯ, ಶಿಕ್ಷಣ, ಉದ್ಯೋಗ, ಬಡತನ ಸೇರಿದಂತೆ ಜನರು ಎದುರಿಸುತ್ತಿರುವ ಸಮಸ್ಯೆಗಳ ಅನಾವರಣ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಾಗುತ್ತಿದೆ. ಇಂತಹ ಸಮಸ್ಯೆಗಳಿಗೆ ಪಂಚರತ್ನ ಯೋಜನೆ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದುವರೆಗೂ ಸಿಕ್ಕಿರುವ ಜನರ ಬೆಂಬಲ, ಕಾರ್ಯಕರ್ತರ ಉತ್ಸಾಹ ನೋಡಿದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಗುರಿ ತಲುಪುವುದು ಕಷ್ಟವಾಗಲಾರದು ಎನಿಸುತ್ತಿದೆ. ಜನರು ಕೂಡ ಬದಲಾವಣೆ ಬಯಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದ್ದಾರೆ.

ನಾಳೆ ಗುಜರಾತ್ ವಿಧಾನಸಭಾ ಮೊದಲ ಹಂತದ ಚುನಾವಣೆ

ಪಂಚರತ್ನ ಯೋಜನೆಯಡಿ 1.25 ಲಕ್ಷ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿದ್ದು, ಐದು ವರ್ಷದಲ್ಲಿ ಈ ಯೋಜನೆ ಅನುಷ್ಠಾನಗೊಳಿಸದಿದ್ದರೆ, ಜೆಡಿಎಸ್ ವಿಸರ್ಜನೆ ಮಾಡುವುದಾಗಿ ಪದೇ ಪದೇ ಹೇಳುತ್ತಿದ್ದಾರೆ.
ನ.18ರಿಂದ ಆರಂಭಗೊಂಡಿರುವ ಮೊದಲ ಹಂತದ ಈ ಯಾತ್ರೆಯು ಡಿಸೆಂಬರ್ 27ರವರೆಗೆ ಒಟ್ಟು 36 ದಿನಗಳ ಕಾಲ ಆರು ಜಿಲ್ಲೆಗಳ 34 ವಿಧಾನಸಭಾ ಕ್ಷೇತ್ರಗಳಲ್ಲಿ ಜರುಗಲಿದೆ.

JDS, Pancharatna, Rath, Yatra, hd kumaraswamy, #ಪಂಚರತ್ನ_ರಥಯಾತ್ರೆ

Articles You Might Like

Share This Article