ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾಳೆಯಿಂದ ಪಂಚರತ್ನ ರಥಯಾತ್ರೆ

Social Share

ಬೆಂಗಳೂರು, ಜ.4- ಜೆಡಿಎಸ್‍ನ ಮಹತ್ವದ ಪಂಚರತ್ನ ರಥಯಾತ್ರೆಯ ಎರಡನೇ ಹಂತವು ನಾಳೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾರಂಭವಾಗಲಿದೆ. ಬೀದರ್ ನಿಂದ ನಾಳೆ ಆರಂಭವಾಗಲಿರುವ ಎರಡನೇ ಹಂತದ ಯಾತ್ರೆಯು ಜನವರಿ 12ರವರೆಗೆ ಒಟ್ಟು 8 ದಿನಗಳ ಕಾಲ ನಡೆಯಲಿದೆ.

ಬೀದರ್ ಹಾಗೂ ಕಲ್ಬುರ್ಗಿ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆಯಿಂದ ಜ.8ರವರೆಗೆ ಬೀದರ್ ಉತ್ತರ, ಬೀದರ್ ದಕ್ಷಿಣ, ಹುಮ್ನಾಬಾದ್ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚರತ್ನ ಪಂಚರತ್ನ ಯಾತ್ರೆ ಹಮ್ಮಿಕೊಳ್ಳಲಾಗುತ್ತದೆ.

ಜ.9ರಿಂದ ಜ.12ರವರೆಗೆ ಅಳಂದ, ಚಿಂಚೋಳಿ, ಸೇಡಂ, ಅಬ್ಜಲ್‍ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆಸಲು ಉದ್ದೇಶಿಸಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿರುವ ಜೆಡಿಎಸ್ ಕಳೆದ ನವೆಂಬರ್ 18ರಂದು ಕೋಲಾರ ಜ್ಲಿಲೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಮೊದಲ ಹಂತದ ಪಂಚರತ್ನ ರಥಯಾತ್ರೆಯನ್ನು ಪ್ರಾರಂಭಿಸಿತ್ತು. ಮೊದಲ ಹಂತ ರಥಯಾತ್ರೆಯು ಡಿಸೆಂಬರ್ 31ರಂದು ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಪೂರ್ಣಗೊಂಡಿದೆ.

ಮೊದಲ ಹಂತದ ರಥಯಾತ್ರೆಯನ್ನು ಒಟ್ಟು 35 ದಿನಗಳ ಕಾಲ 34 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಲಾಗಿದೆ. ಒಟ್ಟು 3500 ಕಿ.ಮೀ.ನಷ್ಟು ರಥಯಾತ್ರೆಯನ್ನು ನಡೆಸಲಾಗಿದೆ. ಮೊದಲ ಹಂತದಲ್ಲಿ 2500ಕ್ಕೂ ಗ್ರಾಮಗಳಿಗೆ ಭೇಟಿ ಮಾಡಲಾಗಿದ್ದು, 20 ಲಕ್ಷಕ್ಕೂ ಜನರು ನೇರವಾಗಿ ಭಾಗಿಯಾಗಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣದ ಮೂಲಕ 1.5 ಕೋಟಿ ಜನರನ್ನು ಈ ಯಾತ್ರೆ ತಲುಪಿದೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.

ಸುಳ್ಳು ಆರೋಪದ ಸೆರವಾಸಕ್ಕೆ 10 ಸಾವಿರ ಕೋಟಿ ಪರಿಹಾರ ಕೇಳಿದ ನಿರ್ದೋಷಿ

ಮೊದಲ ಹಂತದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ರಥಯಾತ್ರೆಯು ಯಶ್ವಯಾಗಿ ಪೂರ್ಣಗೊಂಡಿದ್ದು, ಎರಡನೇ ಹಂತದ ಯಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ಮೂಲಕ ವಿಧಾನಸಭೆ ಚುನಾವಣಾ ಪ್ರಚಾರ ಕೈಗೊಳ್ಳಲಾಗಿದೆ. ಜನಸಂಪರ್ಕ ಸಭೆ, ರ್ಯಾಲಿ, ಗ್ರಾಮ ವಾಸ್ತವ್ಯದ ಮೂಲಕ ಪಂಚರತ್ನ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಕೊಡಲಾಗುತ್ತಿದೆ.

ಸ್ವಂತ ಬಲದ ಸರ್ಕಾರ ರಚನೆ ಮಾಡುವ ಅವಕಾಶವನ್ನು ಜನರು ಜೆಡಿಎಸ್‍ಗೆ ನೀಡಿದರೆ, ಐದು ವರ್ಷಗಳಲ್ಲಿ ಪಂಚರತ್ನ ಯೋಜನೆಗಳನ್ನು ಅನುಷ್ಠಾನಗೊಳಿಸುವ ಭರವಸೆ ನೀಡಲಾಗುತ್ತಿದೆ. ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ರಥಯಾತ್ರೆ ಪೂರ್ಣಗೊಳಿಸಿದ ನಂತ ರ ಮಲೆನಾಡು ಭಾಗಕ್ಕೆ ಪ್ರವೇಶಿಸುವ ಯಾತ್ರೆಯನ್ನು ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಸ ಲಾಗುತ್ತದೆ.

ಅಂಗನವಾಡಿ ಶಿಕ್ಷಕರಾಗಲು ಡಿಫ್ಲೋಮಾ ಕಡ್ಡಾಯ

ಮಾರ್ಚ್‍ವರೆಗೂ ಈ ಯಾತ್ರೆ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಲಾಗುತ್ತದೆ. ಮೈಸೂರಿನಲ್ಲಿ ಯಾತ್ರೆಯ ಸಮಾರೋಪ ನಡೆಲಾಗುತ್ತದೆ. ಮಾರ್ಚ್ 15ರೊಳಗೆ ಪಂಚರತ್ನ ರಥಯಾತ್ರೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಮುಂಬರುವ ವಿಧಾನಸಭಾ ಚುನಾವಣೆ ಯಲ್ಲಿ ಪಕ್ಷದ ವತಿಯಿಂದ ಕಣಕ್ಕಿಳಿಸಲಿರುವ ಅಭ್ಯರ್ಥಿಗಳಿಗೆ ಈ ಯಾತ್ರೆಯನ್ನು ಯಶಸ್ವಿ ಗೊಳಿಸುವ ಹೊಣೆಗಾರಿಕೆ ನೀಡಲಾಗಿದೆ. ಯಾತ್ರೆಯ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಿದ ವಿವಿಧ ಬೆಳೆಗಳ ಬೃಹತ್ ಹಾರಗಳು ಹೊಸ ದಾಖಲೆ ನಿರ್ಮಿಸಿವೆ.

JDS, Pancharatna, Rath Yatra, Kalyan Karnataka ,

Articles You Might Like

Share This Article