ನ.14ರಿಂದ ಜೆಡಿಎಸ್‍ನ ಪಂಚರತ್ನ ರಥಯಾತ್ರೆ ಪ್ರಾರಂಭ

Social Share

ಬೆಂಗಳೂರು,ನ.10- ಮಳೆಯಿಂದಾಗಿ ಮುಂದೂಡಲಾಗಿದ್ದ ಜೆಡಿಎಸ್‍ನ ಪಂಚರತ್ನ ರಥಯಾತ್ರೆಯು ನ.14ರಿಂದ ಪ್ರಾರಂಭವಾಗಲಿದೆ. ಅಂದೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಾಗುತ್ತದೆ. ಈಗಾಗಲೇ ನಿಗದಿಯಾಗಿರುವಂತೆ ಗಡಿನಾಡು ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾಕ್ಷೇತ್ರದಿಂದ ಈ ಯಾತ್ರೆ ಪ್ರಾರಂಭವಾಗಲಿದ್ದು, ಡಿ.6ರವರೆಗೂ ನಿರಂತರವಾಗಿ ನಡೆಯಲಿದೆ.

ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಂಚರತ್ನ ರಥ ಯಾತ್ರೆಗೆ ಚಾಲನೆ ನೀಡಲಾಗುತ್ತದೆ. ನ.1ರಂದು ಈ ಯಾತ್ರೆಯನ್ನು ಪ್ರಾರಂಭಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿತ್ತು. ಆದರೆ, ಮಳೆ ಎಡೆಬಿಡದೆ ಸುರಿದಿದ್ದರಿಂದ ಒಂದು ವಾರಗಳ ಕಾಲ ಪಂಚರತ್ನ ರಥಯಾತ್ರೆಯನ್ನು ಮುಂದೂಡಲಾಗಿತ್ತು.

ಈಗ ಮಳೆ ಬಿಡುವುಕೊಟ್ಟಿರುವುದರಿಂದ ಮೊದಲ ಹಂತದ ರಥ ಯಾತ್ರೆ ಪ್ರಾರಂಭವಾಗಲಿದೆ. ರಥ ಯಾತ್ರೆಗೆ ಚಾಲನೆ ನೀಡಿದ ನಂತರ ಬೃಹತ್ ಸಮಾವೇಶ ನಡೆಸಲಿದ್ದು, ಆ ಸಮಾವೇಶದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ.
ಸಂಭವನೀಯ ಅಭ್ಯರ್ಥಿಗಳಿಂದ ಜೆಡಿಎಸ್‍ನಿಂದ ಸ್ರ್ಪಧಿಸಿ ಚುನಾಯಿತರಾದ ಮೇಲೆ ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ ಎಂಬ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ.

‘ಒಂದು ದೇಶ ಒಂದು ಚುನಾವಣೆ’ ನಿರ್ಧಾರ ಶಾಸಕಾಂಗಕ್ಕೆ ಬಿಟ್ಟಿದ್ದು

ಪ್ರವಾಸದ ಸಂದರ್ಭದಲ್ಲಿ ಜನ ಸಂಪರ್ಕ ಸಭೆ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯವೂ ಇರುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ನ.14ರಿಂದ ಆರಂಭವಾಗುವ ಮೊದಲ ಹಂತದ ಯಾತ್ರೆಯದು ಒಟ್ಟು 23 ದಿನಗಳ ಕಾಲ ನಡೆಯಲಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು, ಬಂಗಾರಪೇಟೆ, ಮಾಲೂರು, ಕೋಲಾರ, ಶ್ರೀನಿವಾಸಪುರ, ಕ್ಷೇತ್ರಗಳಲ್ಲಿ ಯಾತ್ರೆ ಪ್ರಾವಾಸ ಕೈಗೊಳ್ಳಲಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು ಜಿಲ್ಲೆಯ ತುಮಕೂರು ನಗರ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಕುಣಿಗಲ್ ಹಾಗೂ ತುಮಕೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ರಥಯಾತ್ರೆ ಸಾಗಲಿದೆ.

ನಾಳೆ ಬೆಂಗಳೂರಲ್ಲಿ ಮೋದಿ ಮೇನಿಯಾ, ಇಲ್ಲಿದೆ ಕಾರ್ಯಕ್ರಮಗಳ ಕಂಪ್ಲೀಟ್ ಡೀಟೇಲ್ಸ್

ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಈ ರಥಯಾತ್ರೆಗೆ ಬಿಡುವು ಕೊಟ್ಟು ಆನಂತರ 2ನೇ ಹಂತದ ರಥಯಾತ್ರೆಯನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Articles You Might Like

Share This Article