ಶ್ರಾವಣದಲ್ಲಿ ಜೆಡಿಎಸ್‍ನ ಪಂಚರತ್ನ ಆರಂಭ

Social Share

ಬೆಂಗಳೂರು, ಜು.21- ಜೆಡಿಎಸ್‍ನ ಮಹತ್ವದ ಪಂಚರತ್ನ ರಥಯಾತ್ರೆಯು ಶ್ರಾವಣ ಮಾಸದಲ್ಲಿ ಆರಂಭವಾಗಲಿದೆ.
ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ ಬಹುಮತ ಗಳಿಸಿ ಅಧಿಕಾರಕ್ಕೆ ಬರಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಈಗಾಗಲೇ ಚುನಾವಣಾ ಕಾರ್ಯತಂತ್ರ ಆರಂಭಿಸಿದೆ. ಚುನಾವಣಾ ಪ್ರಚಾರದ ಅಂಗವಾಗಿ ಪಂಚರತ್ನ ರಥಯಾತ್ರೆಯನ್ನು ರಾಜ್ಯದಲ್ಲಿ ಕೈಗೊಳ್ಳಲಿದೆ.

ಸದ್ಯದಲ್ಲೇ ರಥಯಾತ್ರೆ ಆರಂಭದ ಸ್ಥಳ ಹಾಗೂ ದಿನಾಂಕವನ್ನು ಘೋಷಿಸಲಾಗುತ್ತದೆ. ರಥಯಾತ್ರೆ ಸಂದರ್ಭದಲ್ಲಿ ಮುಂಬರುವ ಚುನಾವಣಾ ಪ್ರಣಾಳಿಕೆಯ ಅಂಶಗಳನ್ನು ಜನರ ಮುಂದಿಡಲಾಗುತ್ತದೆ. ಪ್ರತಿದಿನವೂ ಒಂದೆರಡು ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಂಡು ಯಾತ್ರೆಯ ಅಂಗವಾಗಿ ಬಹಿರಂಗ ಸಮಾವೇಶ, ಜನಸಂಪರ್ಕ ಸಭೆ, ಸಂವಾದ, ಚರ್ಚೆಯನ್ನು ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿ ದಂತೆ ಎಲ್ಲ ಪ್ರಮುಖ ನಾಯಕರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆಯಾ ವಿಧಾನಸಭಾ ಕ್ಷೇತ್ರದ ಎಲ್ಲ ನಾಯಕರು ಪಾಲ್ಗೊಂಡು ಯಶಸ್ವಿಯಾಗಿ ನಡೆಸಲು ಉದ್ದೇಶಿಸಲಾಗಿದೆ.

ಈಗಾಗಲೇ ಜನತಾ ಜಲಧಾರೆ ಕಾರ್ಯ ಕ್ರಮ ವನ್ನು ರಾಜ್ಯದಲ್ಲಿ ನಡೆಸಲಾಗಿದೆ. ಇದರ ಬೆನ್ನಹಿಂದೆಯೇ ಬೆಂಗಳೂರಿನಲ್ಲಿ ಜನತಾ ಮಿತ್ರ ಕಾರ್ಯಕ್ರಮ ನಡೆಸಲಾಗು ತ್ತಿದೆ. ಇದಾದ ಬಳಿಕ ಪಂಚರತ್ನ ಕಾರ್ಯ ಕ್ರಮವನ್ನು ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಸಮರ್ಪಕ ವಾಗಿ ನೀರಾವರಿ ಯೋಜನೆ ಅನುಷ್ಠಾನ ಗೊಳಿಸುವುದು, ನಿರುದ್ಯೋಗ, ವಸತಿ ಸಮಸ್ಯೆ ನಿವಾರಣೆ ಸೇರಿದಂತೆ ಹಲವು ಮಹತ್ವದ ಭರವಸೆಗಳನ್ನು ಜೆಡಿಎಸ್ ಜನರ ಮುಂದಿಡುತ್ತಿದೆ.

ಬೆಂಗಳೂರಿನಲ್ಲಿ ಜನತಾ ಮಿತ್ರ ಸಮಾರೋಪ ನಡೆಸಲು ಉದ್ದೇಶಿಸಲಾಗಿದೆ. ಸುಮಾರು ಒಂದು ಲಕ್ಷ ಕಾರ್ಯಕರ್ತರನ್ನು ಸೇರಿಸಿ ಸಮಾವೇಶ ಮಾಡುವ ಉದ್ದೇಶವಿದೆ. ಒಂದೆರಡು ದಿನಗಳಲ್ಲಿ ಸಮಾವೇಶದ ಸ್ಥಳ, ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆಷಾಢಮಾಸ ಕಳೆದ ನಂತರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಸಾಧ್ಯತೆಗಳಿವೆ.

Articles You Might Like

Share This Article