ಬೆಂಗಳೂರು, ಮಾ.4- ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭಿಸಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭವು ಮಾರ್ಚ್ 26ರಂದು ಮೈಸೂರಿನಲ್ಲಿ ಜರುಗಲಿದೆ.
ಬೆಂಗಳೂರಿನಿಂದ ಮೈಸೂರಿನವರೆಗೆ ಬೃಹತ್ ರೋಡ್ ಶೋ ನಡೆಸಲು ಉದ್ದೇಶಿಸಿದೆ.
ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ರೋಡ್ ಶೋ ಮಾಡಲಿದ್ದು, ಆ ರೋಡ್ ಶೋದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಲು ಯೋಜಿಸಲಾಗಿದೆ. ಅಲ್ಲದೆ, ಸಮಾರೋಪ ಸಮಾವೇಶದಲ್ಲಿ ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚï.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮುಂಬೈ-ಗೋವಾ ನಡುವೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು
ಪಂಚರತ್ನ ರಥಯಾತ್ರೆ ಸಮಾರೋಪವು ಐತಿಹಾಸಿಕ ಸಮಾವೇಶವಾಗಲಿದೆ. ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂತಹ ಸಮಾವೇಶ ಅದಾಗಿರುತ್ತದೆ ಎಂದು ತಿಳಿಸಿದ್ದಾರೆ.
ಇಬ್ಬರು ಉಗ್ರರಿಗೆ ಜಾಮೀನು ನೀಡಿದ ಅಲಹಾಬಾದ್ ಹೈಕೋರ್ಟ್
ಮಾ. 11 ಅಥವಾ 14ರಂದು ಜೆಡಿಎಸ್ ಎರಡನೇ ಪಟ್ಟ್ಟಿ ಪ್ರಕಟಿಸಲಾಗುವುದು. ಎರಡನೇ ಪಟ್ಟಿ ಅಂತಿಮ ಹಂತದಲ್ಲಿದೆ. ಆ ಪಟ್ಟಿಯಲ್ಲಿ 60ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರುಗಳು ಇರುತ್ತವೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ. ಹಾಸನದ ಜಿಲ್ಲೆಯ ರಾಜಕಾರಣವನ್ನು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೇ ಬಿಟ್ಟಿದ್ದೇನೆ. ಪಕ್ಷಕ್ಕೆ ದುಡಿದವರನ್ನು ನಾನು ಎಂದೂ ಕೈ ಬಿಟ್ಟಿಲ್ಲ ಎಂದಿದ್ದಾರೆ.
jds, pancharatna yatra, March 26, Mysore,