ಮಾ.8 ರಿಂದ ಮತ್ತೆ ಪಂಚರತ್ನ ರಥಯಾತ್ರೆ ಆರಂಭ

Social Share

ಬೆಂಗಳೂರು, ಮಾ.5-ಜೆಡಿಎಸ್‍ನ ಪಂಚರತ್ನ ರಥಯಾತ್ರೆ ಮತ್ತು ಜನ ಸಂಪರ್ಕ ಕಾರ್ಯಕ್ರಮವು ಮತ್ತೆ ತುಮಕೂರು ಜಿಲ್ಲೆಯ ತಿಪಟೂರಿನಿಂದ ಮಾ. 8ರಂದು ಮರು ಆರಂಭವಾಗಲಿದ್ದು, ಮಾ.26ರಂದು ಸಮಾರೋಪ ಸಮಾರಂಭ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ಈಗಾಗಲೇ ರಾಜ್ಯ 75 ಕ್ಷೇತ್ರಗಳಲ್ಲಿ ಪೂರ್ಣಗೊಂಡಿದೆ. ಮತ್ತೆ 33 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ. ಈ ಯಾತ್ರೆ ಮೂಲಕ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಮಹತ್ವದ ಪಂಚ ಯೋಜನೆಗಳ ಬಗ್ಗೆ ಆಯಾ ಕ್ಷೇತ್ರದ ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆ ಪ್ರಚಾರ ಕೈಗೊಳ್ಳಲಾಗಿದೆ.

ಬಿಜೆಪಿ ಮೇಲೆ ಮುನಿಸಿಕೊಂಡ ವಿ.ಸೋಮಣ್ಣ

ಸ್ವಂತ ಬಲದ ಮೇಲೆ ಅಕಾರಕ್ಕೆ ಬರಲು 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಗುರಿಯೊಂದಿಗೆ ಚುನಾವಣಾ ಪ್ರಚಾರ ಆರಂಭಿಸಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಎರಡನೇ ಹಂತದಲ್ಲಿ ಸುಮಾರು 60 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಲಾಗಿದೆ. ಇನ್ನೊಂದು ವಾರದಲ್ಲಿ ಎರಡನೇ ಪಟ್ಟಿಯೂ ಬಿಡುಗಡೆ ಮಾಡುಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭಿಸಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಯು ಈಗಾಗಲೆ ಎರಡು ಹಂತವನ್ನು ಪೂರ್ಣಗೊಳಿಸಿದೆ. ಮಾ.8ರಂದು ತಿಪಟೂರಿನಿಂದ ಆರಂಭವಾಗುವ ಪಂಚರತ್ನ ರಥಯಾತ್ರೆಯು ಹಾಸನ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಕಲ್ಬುರ್ಗಿ ಜಿಲ್ಲೆಗಳಲ್ಲಿ ನಡೆಯಲಿದೆ.

ಈ ಯಾತ್ರೆಯ ಸಮಾರೋಪ ಸಮಾರಂಭವು ಮಾರ್ಚ್ 26ರಂದು ಮೈಸೂರಿನಲ್ಲಿ ಜರುಗಲಿದ್ದು, ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ರೋಡ್ ಶೋ ಮಾಡಲಿದ್ದು, ಆ ರೋಡ್ ಶೋದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಲು ಯೋಜಿಸಲಾಗಿದೆ.

ಮಾ.24ರಿಂದ ಮೆತ್ತೆ ಸಾರಿಗೆ ನೌಕರರ ಮುಷ್ಕರ

ಸಮಾರೋಪದ ನಂತರವೂ ಯಾತ್ರೆ ಮುಂದುವರೆಯಲಿದೆ. ಒಟ್ಟಾರೆ ಅಂತಿಮ ಹಂತದಲ್ಲಿ 22 ಕ್ಷೇತ್ರಗಳಲ್ಲಿ 33 ದಿನಗಳ ಕಾಲ ಯಾತ್ರೆ ಸಾಗಲಿದೆ. ಮಾ. 27ರಂದು ಬ್ಯಾಟರಾಯನಪುರ, ಮಾ.28ರಿಂದ 30ರವರೆಗೆ ಯಶವಂತಪುರ ಕ್ಷೇತ್ರದಲ್ಲಿ ನಡೆಸಲಾಗುವುದು. ಮಾ.31ರಂದು ಬಸವನಗುಡಿ, ಏಪ್ರಿಲ್ ಒಂದರಂದು ಗೋವಿಂದರಾಜನಗರ, ಏ.2ರಂದು ಯಲಹಂಕ ಕ್ಷೇತ್ರದಲ್ಲಿ ನಡೆಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ.

ಏಪ್ರಿಲ್ 3ರಿಂದ 7ರವರೆಗೆ ಯಾತ್ರೆಗೆ ಬಿಡುವು ನೀಡಲಾಗಿದ್ದು, ಏ.8ರಂದು ಹಿರಿಯೂರು, ಏ.9ರಂದು ಚಳ್ಳಕೆರೆ ಕ್ಷೇತ್ರದಲ್ಲಿ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

jds, pancharatna yatra, March 8, hd kumaraswamy,

Articles You Might Like

Share This Article