ಬಿಜೆಪಿ ಸರ್ಕಾರದ ಭಾರೀ ಹಗರಣ ಬಾಂಬ್ ಸಿಡಿಸಲು ಜೆಡಿಎಸ್ ಸಿದ್ಧತೆ

Social Share

ಬೆಂಗಳೂರು,ಸೆ.17- ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು, ರಾಜ್ಯ ಸರ್ಕಾರದ ದೊಡ್ಡ ಹಗರಣವೊಂದನ್ನು ವಿಧಾನಸಭೆ ಕಲಾಪದಲ್ಲಿ ಸೋಮವಾರ ಪ್ರಸ್ತಾಪಿಸುವ ಸಾಧ್ಯತೆ ಇದೆ. ಇದಕ್ಕೆ ಸಂಬಂಧಿಸಿದ ಪೂರಕ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರದ ದೊಡ್ಡ ಹಗರಣವೊಂದನ್ನು ಸದನದಲ್ಲಿ ಬಯಲು ಮಾಡುವುದಾಗಿ ಕುಮಾರಸ್ವಾಮಿ ಇತ್ತೀಚೆಗೆ ಹೇಳಿದ್ದರು.
ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರದ ಆಸ್ತಿ ಕಬಳಿಸುವ ಹುನ್ನಾರದ ಬಗ್ಗೆ ಸ್ಫೋಟಕ ಮಾಹಿತಿ ನೀಡುವುದಾಗಿ ತಿಳಿಸಿದ್ದರು.

ಆದರೆ, ದೊಡ್ಡ ಹಗರಣ ಯಾವುದು ಎಂಬುದರ ಬಗ್ಗೆ ಸುಳಿವು ನೀಡಿಲ್ಲ. ಈತನಕ ಗುಟ್ಟಾಗಿದ್ದು, ಸೋಮವಾರ ಸಭಾಧ್ಯಕ್ಷರು ಅವಕಾಶ ನೀಡಿದರೆ, ದಾಖಲೆ ಸಹಿತ ಪ್ರಸ್ತಾಪ ಮಾಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮುಖ ಇಲಾಖೆ ಯೊಂದರ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ. ಅದು ರಾಮನಗರ ಜಿಲ್ಲೆಗೆ ಸಂಬಂಧಿಸಿದೆಯೆ ಅಥವಾ ಬೇರೆಯೇ ಎಂಬುದರ ಬಗ್ಗೆಯೂ ಸುಳಿವು ನೀಡಿಲ್ಲ. ಈ ವಿಚಾರವನ್ನು ಗೌಪ್ಯವಾಗಿಟ್ಟಿದ್ದು ಸೋಮವಾರ ಸೋಟಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಭರಪೂರ ಕೊಡುಗೆ ಘೋಷಿಸಿದ ಸಿಎಂ ಬೊಮ್ಮಾಯಿ

ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ, ಎಂದು ಪದೇಪದೆ ಕೆಣಕುತ್ತಿದ್ದು, ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಪ್ರಕಟಿಸಿದ್ದರು.

ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರ್ಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಗುಡುಗಿದ್ದರು.

ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡ್ತಾ ಇದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ ಎಂಬ ಮಾಹಿತಿ ನೀಡಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ.ಅದಕ್ಕೇ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರೂಪಾಯಿ ಕಬಳಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದರು.

Articles You Might Like

Share This Article