ಡಿಸಿಎಂ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು,ಮೇ.8- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಹಾಸನದ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ ನಡೆಸಿದೆ. ಹಾಸನದ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಆರೋಪ ಕೇಳಿಬಂದ ಕೂಡಲೇ ಸಿಡಿದೆದ್ದಿರುವ ಜೆಡಿಎಸ್‌ ನಿನ್ನೆಯಿಂದ ಬೀದಿಗಿಳಿದು ಪ್ರತಿಭಟನೆ ನಡೆಸಿ ಶಿವಕುಮಾರ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಮೈಸೂರು, ರಾಮನಗರ, ನಾಗಮಂಗಲ, ದೇವನಹಳ್ಳಿ, ಚಿತ್ರದುರ್ಗ ಮತ್ತಿತರೆಡೆ ಪ್ರತಿಭಟನೆ ನಡೆಸಲಾಗಿದೆ. ನಿನ್ನೆ ಬೆಂಗಳೂರು, ಮಂಡ್ಯ ಹಾಗೂ ಹಾಸನದಲ್ಲಿ … Continue reading ಡಿಸಿಎಂ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಜೆಡಿಎಸ್‌ ಪ್ರತಿಭಟನೆ