Friday, November 22, 2024
Homeರಾಜ್ಯಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಜೆಡಿಎಸ್ ಸಿದ್ಧತೆ

ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಜೆಡಿಎಸ್ ಸಿದ್ಧತೆ

ಬೆಂಗಳೂರು, ಜ.1- ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯವನ್ನು ಜೆಡಿಎಸ್ ಸಂಗ್ರಹಿಸುತ್ತಿದೆ. ಕಳೆದ ಒಂದು ವಾರದಿಂದಲೂ ಪಕ್ಷದ ಮುಖಂಡರೊಂದಿಗೆ ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ಗೆಲ್ಲಲು ಸಾಧ್ಯವಿರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ಸ್ಪರ್ಧೆ ಮಾಡಲಿರುವ ಕ್ಷೇತ್ರಗಳ ಪ್ರಮುಖ ಮುಖಂಡರು, ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಗಳ ಆಯ್ಕೆ ಚುನಾವಣೆ ಕಾರ್ಯ ತಂತ್ರದ ಬಗ್ಗೆ ನಿರಂತರ ಸಮಾಲೋಚನೆಯನ್ನು ಕುಮಾರಸ್ವಾಮಿ ನಡೆಸುತ್ತಿದ್ದಾರೆ.

ಮಕರ ಸಂಕ್ರಾಂತಿ ಹಬ್ಬದ ನಂತರ ಸ್ರ್ಪಧಿಸಲಿರುವ ಕ್ಷೇತ್ರಗಳ ಪ್ರಕಟ ಹಾಗೂ ಸಂಭವನೀಯ ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆಗಿಳಿಯಲು ನಿರ್ಧರಿಸಿದೆ. ಜೆಡಿಎಸ್ ಪ್ರಾಬಲ್ಯವಿರುವ ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವ ಇಚ್ಛೆಯನ್ನು ಬಿಜೆಪಿಯ ವರಿಷ್ಠರ ಗಮನಕ್ಕೆ ತರಲಾಗಿದೆ.

ಹೂಗುಚ್ಛ ಬೇಡ, ಅನಾಥ ಮಕ್ಕಳಿಗೆ ಸಹಾಯ ಮಾಡಿ : ದಯಾನಂದ

ಈ ನಾಲ್ಕು ಕ್ಷೇತ್ರಗಳಲ್ಲದೆ, ರಾಯಚೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಬಗ್ಗೆಯೂ ಮಿತ್ರ ಪಕ್ಷಗಳು ಸಮಾಲೋಚನೆ ನಡೆಸಿ ಗೆಲ್ಲುವ ಪಕ್ಷದ ಅಭ್ಯರ್ಥಿಗೆ ಅವಕಾಶ ಮಾಡಿಕೊಡಲಿವೆ. ಕೆಲವೊಂದು ಕ್ಷೇತ್ರಗಳನ್ನು ಬದಲು ಮಾಡಿಕೊಳ್ಳಲು ಕೂಡಾ ಬಿಜೆಪಿ-ಜೆಡಿಎಸ್ ನಾಯಕರು ಮುಕ್ತವಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಹೀಗಾಗಿ ಸಂಕ್ರಾಂತಿಯವರೆಗೂ ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷಕ್ಕಾದ ಹಿನ್ನಡೆ, ಪಕ್ಷ ದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ಕೊಳ್ಳುವುದು ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಆಯಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ, ಸಲಹೆಗಳನ್ನು ಪಡೆಯಲಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

RELATED ARTICLES

Latest News