ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ

Social Share

ಬೆಂಗಳೂರು,ಅ.27- ನಗರದ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನ.1 ರಂದು ಪ್ರಾರಂಭಿಸಲಿರುವ ಪಂಚರತ್ನ ರಥಯಾತ್ರೆಯ ಒಂದು ರಥಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮುಖಂಡರು ಪೂಜೆ ಸಲ್ಲಿಸಿದರು.

ನವೆಂಬರ್ ಒಂದರಂದು ಕೋಲಾರ ಜಿಲ್ಲಾಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಕಳೆದ 1994ರಲ್ಲಿ ಹೆಚ್.ಡಿ.ದೇವೇಗೌಡರು ಕುರುಡುಮಲೆಯಿಂದಲೇ ಚುನಾವಣಾ ಪ್ರಚಾರ ಆರಂಭ ಮಾಡಿದ್ದರು.

ಆಗ ಅವರು ಬಹುಮತ ಗಳಿಸಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದ್ದರು. ಈಗ ನಾವೂ ಅಲ್ಲಿಂದಲೇ ಪಂಚರತ್ನ ರಥಯಾತ್ರೆ ಆರಂಭ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಖರ್ಗೆ AICC ಅಧ್ಯಕ್ಷರಾಗುತ್ತಿದ್ದಂತೆ ಕಾಂಗ್ರೆಸ್‍ನಲ್ಲಿ ‘ಸಂಚಲನ’

ಪಂಚರತ್ನ ಆರಂಭದ ದಿನವೇ ವಿಧಾನಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಾರ್ವಜನಿಕ ಸಮಾರಂಭದಲ್ಲಿಯೇ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ನ.1ರಿಂದ 5ರವರೆಗೆ ಕೋಲಾರ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಲಿದೆ.

ನ.6 ರಿಂದ 10 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ, ನ.11 ರಿಂದ 13 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ, ನ.14 ರಿಂದ 23 ರವರೆಗೆ ತುಮಕೂರು ಜಿಲ್ಲೆ, ನ.24 ರಿಂದ 30 ರವರೆಗೆ ಹಾಸನ ಜಿಲ್ಲೆಯಲ್ಲಿ, ಡಿ.1 ರಂದು ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಡಿ.2 ರಿಂದ 5 ರವರೆಗೆ ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ ಸಂಚಾರ ಮಾಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಒಟ್ಟು 35 ದಿನಗಳ ಕಾಲ ನಡೆಯುವ ಮೊದಲ ಹಂತದ ರಥ ಯಾತ್ರೆಯಲ್ಲಿ ಅನೇಕ ಹಳ್ಳಿ, ಪಟ್ಟಣಗಳನ್ನು ತಲುಪುತ್ತೇವೆ. ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ, ಮಹಿಳಾ ಮತ್ತು ಯುವಜನ ಸಬಲೀಕರಣ ಕುರಿತಂತೆ ರೂಪಿಸಿರುವ ಪಂಚರತ್ನ ಯೋಜನೆ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಹೊಸ ವರುಷದ ಜನವರಿ ತಿಂಗಳಲ್ಲಿ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಪೂಜೆ ನಡೆಸಿ ಆ ಭಾಗದಲ್ಲಿ ಪಂಚರತ್ನ ರಥಯಾತ್ರೆ ಆರಂಭ ಮಾಡಲಾಗುವುದು. ಮುಖ್ಯವಾಗಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದೊಡ್ಡ ಸಮಾವೇಶ ಮಾಡಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದೇವೆ. ಜನವರಿ ನಂತರ ಮಾಜಿ ಸಚಿವ ಜಿ.ಟಿ. ದೇವೇಗೌಡರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಚೀನಾ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಭಾರತ, ಯಾವ ಕ್ಷೇತ್ರದಲ್ಲಿ ಗೊತ್ತೇ..?

ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕ್ರಮಗಳಿಗೂ ನಮ್ಮ ಕಾರ್ಯಕ್ರಮಗಳಿಗೂ ವ್ಯತ್ಯಾಸ ಇದೆ. ಯಾವ ನಾಯಕರ ಬಗ್ಗೆಯೂ ನಾವು ಟೀಕೆ ಮಾಡಲ್ಲ. ನಮದು ನಿಂದನಾ ಯಾತ್ರೆ ಅಲ್ಲ. ಜನರಿಗೆ ನಮ್ಮ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತೇವೆ. ಭಾರತ್ ಜೋಡೋ ಕಾರ್ಯಕ್ರಮದ ಬಗ್ಗೆ ಯಾವುದೇ ಆತಂಕ ಇಲ್ಲ. ನಮ್ಮ ರಥಯಾತ್ರೆ ವಿನೂತನವಾಗಿ ಇರಲಿದೆ. ಅಭಿವೃದ್ಧಿಗೆ ಪೂರಕವಾಗಿ ಇರಲಿದೆ. ಒಟ್ಟು 120 ಕ್ಷೇತ್ರಗಳಿಗೆ ಪ್ರವಾಸ ಮಾಡುತ್ತೇವೆ. ಮಾರ್ಚ್ 15 ರ ವರೆಗೆ ಪಂಚರತ್ನ ರಥ ನಡೆಯಲಿದೆ ಎಂದು ಹೇಳಿದ್ದಾರೆ.

ಪಂಚರತ್ನ ರಥಯಾತ್ರೆ ಆರಂಭ ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭೆ ಅವೇಶನದಲ್ಲಿ ಭಾಗವಹಿಸುವುದು ಕಷ್ಟ. ಈ ಬಗ್ಗೆ ವಿಧಾನ ಸಭಾಧ್ಯಕ್ಷರಿಗೆ ಮಾಹಿತಿ ನೀಡುತ್ತೇನೆ. ನನ್ನ ಪರವಾಗಿ ನಮ್ಮ ಪಕ್ಷದ ಶಾಸಕರು ಅವೇಶನದಲ್ಲಿ ಭಾಗವಹಿಸುತ್ತಾರೆ. ಸಮಯ ಬಹಳ ಕಡಿಮೆ ಇದೆ. ಚುನಾವಣೆಗೂ ಸಿದ್ದರಾಗಬೇಕಿದೆ.

ಪಂಚರತ್ನ ಕಾರ್ಯಕ್ರಮ ದಲ್ಲಿ ನಾನು ಹೆಚ್ಚು ತೊಡಗಿಸಿಕೊಳ್ಳುತ್ತೇನೆ. ನಮ್ಮ ಎಲ್ಲ ಶಾಸಕರಿಗೆ ಭಾಗವಹಿಸಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Articles You Might Like

Share This Article