Thursday, April 17, 2025
Homeರಾಜ್ಯಬೆಲೆ ಏರಿಕೆ ಖಂಡಿಸಿ ಏ.12ರಂದು ಹೆಚ್‌ಡಿಕೆ ನೇತೃತ್ವದಲ್ಲಿ ಜೆಡಿಎಸ್‌‍ ಬೃಹತ್‌ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ಏ.12ರಂದು ಹೆಚ್‌ಡಿಕೆ ನೇತೃತ್ವದಲ್ಲಿ ಜೆಡಿಎಸ್‌‍ ಬೃಹತ್‌ ಪ್ರತಿಭಟನೆ

JDS to hold massive protest under HDK leadership on April 12 to condemn price hike

ಶ್ರವಣಬೆಳಗೊಳ, ಏ.8– ಬೆಲೆ ಏರಿಕೆ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏ.12ರಂದು ಬೆಂಗಳೂರು ನಗರದಲ್ಲಿಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಹಮಿಕೊಳ್ಳಲಾಗುವುದು ಎಂದು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್‌ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ತುಂಬುತ್ತಿದೆ. ರಾಜ್ಯ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಬರೆಯ ಶಾಕ್‌ ನೀಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ರಾಜ್ಯದಲ್ಲಿ ಪ್ರಾರಂಭವಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಬೃಹತ್‌ ರ್ಯಾಲಿ ಮೂಲಕ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ನಮ ಮಿತ್ರ ಪಕ್ಷವಾದ ಬಿಜೆಪಿಯು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದೆ ಎಂದಿದ್ದಾರೆ.

ವೈಯಕ್ತಿಕವಾಗಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ಕುಟುಂಬವನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೇತಗಾನಹಳ್ಳಿಯಲ್ಲಿ ಜಮೀನನ್ನು ಕುಮಾರಣ್ಣ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ತನಿಖೆಗೆ ಎಸ್‌‍ಐ ಟಿ ತಂಡವನ್ನು ರಚನೆ ಮಾಡಿದ್ದಾರೆ. ಇದು ನ್ಯಾಯಾಲದ ಅಂಗಳದಲ್ಲಿದೆ, ನಮ ಆತಸಾಕ್ಷಿಗೆ ಅನುಗುಣವಾಗಿ ಕುಮಾರಣ್ಣ ಅವರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಲ್ಲ. ಅವರ ಹೆಸರಿಗೆ ಕಳಂಕ ತರಬೇಕೆಂಬ ಕಾಂಗ್ರೆಸ್‌‍ನ ಉದ್ದೇಶ ಸಂಪೂರ್ಣ ವಿಫಲವಾಗುತ್ತದೆ ಎಂದು ನಿಖಿಲ್‌ ತಿಳಿಸಿದ್ದಾರೆ.

RELATED ARTICLES

Latest News