Monday, May 20, 2024
Homeರಾಜ್ಯಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿಕೆಶಿ ಕೈವಾಡ ಆರೋಪ, ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿಕೆಶಿ ಕೈವಾಡ ಆರೋಪ, ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು,ಮೇ7- ಹಾಸನದ ಪೆನ್‌ಡ್ರೈವ್‌ ಸೋರಿಕೆ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಜೆಡಿಎಸ್‌ ಕಚೇರಿ ಜೆಪಿಭವನದ ಬಳಿ ಬೆಂಗಳೂರು ಮಹಾನಗರ ಜೆಡಿಎಸ್‌ ಅಧ್ಯಕ್ಷ ಎಚ್‌.ಎಂ.ರಮೇಶ್‌ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಡಿ.ಕೆ.ಶಿವಕುಮಾರ್‌ ವಿರುದ್ಧ ಘೋಷಣೆ ಕೂಗಿ ಫಲಕಗಳನ್ನು ಪ್ರದರ್ಶಿಸಿ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು.

ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದ ಜೆಡಿಎಸ್‌ನ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

RELATED ARTICLES

Latest News